ಕಾರವಾರ (ಉತ್ತರಕನ್ನಡ): ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿಯೋರ್ವ ತಾಯಿ ನೋಡಲು ಮನೆಗೆ ಬಂದಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾಂಡೇಲಿಯಲ್ಲಿ ನಡೆದಿದೆ.
ನಗರದ ಅಂಬೇವಾಡಿಯ ನಿರ್ಮಲನಗರದ ನಿವಾಸಿ 16 ವರ್ಷದ ವಿದ್ಯಾರ್ಥಿ ಅಬ್ದುಲ್ ರೆಹಮಾನ್ ಬಾರೆ ಇಮಾಮ್ ಚಪ್ಪರಬಂದ್ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದಾನೆ. ಈತ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ. ವಸತಿ ಶಾಲೆಯಲ್ಲಿ ಓದುತ್ತಿದ್ದ ಬಾಲಕ ತನ್ನ ತಾಯಿಯನ್ನು ನೋಡಬೇಕೆಂದು ಬಯಸಿದ್ದರಿಂದ ತಂದೆಯ ಜೊತೆ ಮನೆಗೆ ಬಂದಿದ್ದ. ಆದರೆ ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.
ಬಾಲಕನ ಆತ್ಮಹತ್ಯೆಗೆ ನಿಖರ ಕಾರಣ ತಿಳದುಬಂದಿಲ್ಲ. ಆದರೆ, ಮೃತ ವಿದ್ಯಾರ್ಥಿ ಕಲಿಯುತ್ತಿದ್ದ ವಸತಿ ಶಾಲೆಯಲ್ಲಿ ರ‍್ಯಾಗಿಂಗ್ ನಡೆಯುತ್ತಿತ್ತು ಎನ್ನಲಾಗಿದೆ. ಈ ಹಿಂದೆ ಕೂಡಾ ಶಾಲೆಯಲ್ಲಿ ರ‍್ಯಾಗಿಂಗ್ ನಡೆದಿತ್ತು. ಇದೇ ನನ್ನ ಮಗನ ಸಾವಿಗೆ ಕಾರಣ ಎಂದು ಪಾಲಕರು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದು, ಸತ್ಯಾಂಶ ತಿಳಿದುಬರಬೇಕಿದೆ.
Kshetra Samachara
25/09/2022 08:53 pm