ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರವಾರ: ವಸತಿನಿಲಯದಲ್ಲಿ ಮಕ್ಕಳೊಂದಿಗೆ ಊಟ ಸವಿದ ಸಿಇಒ

ಕಾರವಾರ: ಮುಂಡಗೋಡ ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ ಇಂದಿರಾ ಗಾಂಧಿ ವಸತಿ ಶಾಲೆಗೆ ಉತ್ತರ ಕನ್ನಡ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಇಂದು ಭೇಟಿ ನೀಡಿದರು.

ಶಾಲೆಯಲ್ಲಿ ಮಕ್ಕಳಿಗೆ ಒದಗಿಸಲಾದ ವ್ಯವಸ್ಥೆಯನ್ನು ವೀಕ್ಷಿದರು. ಇದೇವೇಳೆ ಮಕ್ಕಳೊಂದಿಗೆ ಮಧ್ಯಾಹ್ನದ ಊಟ ಸವಿದು ಮಕ್ಕಳಿಗೆ ನೀಡಲಾಗುವ ಊಟದ ಗುಣಮಟ್ಟ ಪರಿಶೀಲಿಸಿ ಗಮನ ಸೆಳೆದರು. ನಂತರ ಭದ್ರಾಪುರ ಗ್ರಾಮಕ್ಕೆ ಭೇಟಿ ನೀಡಿ ಅಂಗನವಾಡಿ, ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಗ್ರಾಮದಲ್ಲಿ ಮಳೆಗೆ ಹಾನಿಯಾದ ಮನೆಗಳನ್ನು, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಟ್ಟಡ ಸ್ಥಳವನ್ನು ಹಾಗೂ ಜೆಜೆಎಂ ಯೋಜನೆಯಡಿ ನಳ ಅಳವಡಿಸಲಾದ ಮನೆಗಳಿಗೆ ತೆರಳಿ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.

ಜೆಜೆಎಂ ನಳದಲ್ಲಿ ನೀರು ಬಿಡುವ ಸಮಯ, ಮೀಟರ್ ಅಳವಡಿಕೆ, ನೀರಿನ ಗುಣಮಟ್ಟ ಪರಿಶೀಲಿಸಿದರು. ಜೊತೆಗೆ ಶೀಘ್ರವೇ ಶಾಲಾ ಕಟ್ಟಡ ಕೆಡವಿ ಹೊಸ ಕಟ್ಟಡ ರ್ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಹಾಗೂ ಬಿದ್ದ ಮನೆಗಳಿಗೆ ಸೂಕ್ತ ಪರಿಹಾರ ದೊರಕುವ ನಿಟ್ಟಿನಲ್ಲಿ ಕ್ರಮವಹಿಸಲು ಅಧಿಕಾರಿಗಳಿಗೆ ತಿಳಿಸಿದರು.

Edited By : Vijay Kumar
Kshetra Samachara

Kshetra Samachara

09/09/2022 11:50 pm

Cinque Terre

1.82 K

Cinque Terre

0