ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಲು ಸಾಲು ಹಬ್ಬದ ರಜೆ: 500 ಹೆಚ್ಚುವರಿ ಬಸ್ ಬಿಡಲಿದೆ ಎನ್ ಡಬ್ಲ್ಯುಕೆಆರ್ಟಿಸಿ

ಕಾರವಾರ: ಅಕ್ಟೋಬರ್ ತಿಂಗಳಿನ ಮೊದಲ ವಾರದ ಗಾಂಧಿ ಜಯಂತಿ, ನವರಾತ್ರಿ, ದಸರಾ ಹಬ್ಬದ ರಜಾ ದಿನಗಳಲ್ಲಿ ಪ್ರಯಾಣಿಕರ ಓಡಾಟಕ್ಕೆ ಅನುಕೂಲವಾಗುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 500 ಹೆಚ್ಚುವರಿ ವಿಶೇಷ ಸಾರಿಗೆ ಬಸ್ ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.

ಸಾರ್ವಜನಿಕರು ಹಬ್ಬದ ರಜೆಗಳನ್ನು ಉಪಯೋಗಿಸಿಕೊಂಡು ಹಬ್ಬ ಆಚರಿಸಲು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ, ವಾಕರಸಾ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸೆ.30ರಿಂದ ಅ.3 ರವರೆಗೆ, ಅ.5ರಿಂದ ಅ.9ರವರೆಗೆ ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ.

ಈ ಕುರಿತು ಪ್ರಯಾಣಿಕರು ಮುಂಗಡ ಟಿಕೇಟ್‌ಗಳನ್ನು Ksrtc mobile app ಅಥವಾ www.ksrtc.in ವೆಬ್‌ಸೈಟ್‌ನಲ್ಲಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ ಎಂದು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

28/09/2022 04:03 pm

Cinque Terre

6.34 K

Cinque Terre

0

ಸಂಬಂಧಿತ ಸುದ್ದಿ