ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರವಾರಕ್ಕೆ ಆಗಮಿಸಿದ ರಾಜ್ಯಪಾಲ; ಸೀಬರ್ಡ್ ನೌಕಾನೆಲೆಯಲ್ಲಿ ಗೌರವ ಸ್ವೀಕಾರ

ಕಾರವಾರ (ಉತ್ತರಕನ್ನಡ): ನಾಳೆ ಅಂತರರಾಷ್ಟ್ರೀಯ ಕಡಲತೀರ ಸ್ವಚ್ಚತಾ ದಿನದ ಅಂಗವಾಗಿ ನಡೆಯಲಿರುವ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಂದು ಸಂಜೆ ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಕಾರವಾರಕ್ಕೆ ಆಗಮಿಸಿದ್ದಾರೆ.

ಸಂಜೆ ಗೋವಾದಿಂದ ರಸ್ತೆ ಮಾರ್ಗದಲ್ಲಿ ಬಂದ ಅವರನ್ನು ಉತ್ತರಕನ್ನಡ ಜಿಲ್ಲಾಡಳಿತದಿಂದ ಕಾರವಾರ ತಾಲೂಕಿನ ಮಾಜಾಳಿ ಗಡಿಯಲ್ಲಿ ಗೌರವವಂದನೆ ನೀಡಿ ಸ್ವಾಗತಿಸಿಕೊಳ್ಳಲಾಯಿತು. ಬಳಿಕ ಅವರನ್ನು ಅರಗಾದಲ್ಲಿರುವ ಸೀಬರ್ಡ್ ನೌಕಾನೆಲೆಗೆ ಕರೆದೊಯ್ಯಲಾಯಿತು.

ಸೀಬರ್ಡ್ ನೌಕಾನೆಲೆಗೆ ಭೇಟಿ ನೀಡಿದ ಅವರನ್ನು ನೌಕಾನೆಲೆಯ ಅಧಿಕಾರಿಗಳು ಗೌರವಪೂರ್ವಕವಾಗಿ ಸ್ವಾಗತಿಸಿಕೊಂಡರು. ನಂತರ ನೌಸೇನಾಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಅವರು ಸಮಾಲೋಚನೆ ನಡೆಸಿದರು. ಇಂದು ನೌಕಾನೆಲೆಯಲ್ಲೇ ತಂಗಲಿರುವ ಅವರು, ನಾಳೆ ಟ್ಯಾಗೋರ್ ಕಡಲ ತೀರದಲ್ಲಿ ಆಯೋಜನೆಗೊಂಡಿರುವ ಸ್ವಚ್ಚತಾ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ.

Edited By : Nagaraj Tulugeri
PublicNext

PublicNext

16/09/2022 10:56 pm

Cinque Terre

21.07 K

Cinque Terre

0

ಸಂಬಂಧಿತ ಸುದ್ದಿ