ಕಾರವಾರ (ಉತ್ತರಕನ್ನಡ): ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ತಾತ್ವಿಕ ಒಪ್ಪಿಗೆ ಸಿಗುತ್ತಿದ್ದಂತೆ ಚಟುವಟಿಕೆಗಳು ಗರಿಗೆದರಿದೆ.
ಕುಮಟಾದ ವಿವಿಧೆಡೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮಂಗಳೂರಿನ ಕೆ.ಎಸ್.ಹೆಗಡೆ ಆಸ್ಪತ್ರೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಮಿರ್ಜಾನ್, ಕುಮಟಾ ರೈಲು ನಿಲ್ದಾಣ, ಕೊಂಕಣ ಎಜ್ಯುಕೇಷನ್ ಸಮೀಪದ ಜಾಗಗಳಿಗೆ ಭೇಟಿ ನೀಡಿರುವ ಅಧಿಕಾರಿಗಳ ತಂಡ, ಬಳಿಕ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಆಸ್ಪತ್ರೆಗೆ ಜಾಗದ ಕುರಿತು ಆರೋಗ್ಯ, ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪಬ್ಲಿಕ್ ಪ್ರೈವೇಟ್ ಪಾರ್ಟ್ನರ್ಶಿಪ್ ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಾಧ್ಯತೆಗಳ ಪರಿಶೀಲನೆ ನಡೆಸಿದ್ದೇವೆ. ಮೂರು ಜಾಗಗಳನ್ನ ಗುರುತಿಸಿದ್ದು, ಮಾತುಕತೆ ನಡೆಸಿ ಒಂದು ಜಾಗವನ್ನ ಅಂತಿಮಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.
PublicNext
20/09/2022 03:15 pm