ಉತ್ತರಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವ ಹಾಗೂ ವಿವಿಧ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಸಂಬಂಧ ಆರೋಗ್ಯ ಸಚಿವರೊಂದಿಗೆ ನಡೆದ ಸಭೆ ಫಲಪ್ರದವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವರು ಖುದ್ದು ಜಿಲ್ಲೆಗೆ ಭೇಟಿ ನೀಡಿ ಉತ್ತಮ ನಿರ್ಧಾರ ಕೈಗೊಳ್ಳಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೃದಯಭಾಗವಾದ ಕುಮಟಾದ ಆಸುಪಾಸಿನಲ್ಲಿ ಆಸ್ಪತ್ರೆ ಮಾಡಬೇಕೆಂಬ ನಮ್ಮ ಪ್ರಸ್ತಾವನೆಗೆ ಸರ್ಕಾರ ಮತ್ತು ಮಂತ್ರಿಗಳು ಒಪ್ಪಿಕೊಂಡಿದ್ದಾರೆ. ಇರುವಂತಹ ಮೆಡಿಕಲ್ ಕಾಲೇಜಿಗೆ ಎಲ್ಲಾ ಸೌಲಭ್ಯ ಕೊಟ್ಟರೆ ಆರೋಗ್ಯ ಸಮಸ್ಯೆಗಳು ಪರಿಹಾರವಾಗುತ್ತದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಈಡೇರಿದರೆ ನಮ್ಮ ಎಲ್ಲಾ ಬೇಡಿಕೆಗಳು ಈಡೇರುತ್ತದೆ ಎಂದರು.
ಅಧಿವೇಶನದ ಬಳಿಕ ಸಚಿವ ಸುಧಾಕರ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಎಲ್ಲಾ ಅವಕಾಶಗಳನ್ನು ಸರ್ಕಾರ ಮಾಡಿಕೊಡುತ್ತದೆ ಎಂದು ಭರವಸೆ ನೀಡಿದರು.
PublicNext
20/09/2022 04:35 pm