ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪುರಸಭೆ ವಾರ್ಡ್ ಸಂಖ್ಯೆ 14 ಮತ್ತು ಯಲ್ಲಾಪುರ ಪಟ್ಟಣ ಪಂಚಾಯತಿ ವಾರ್ಡ್ ನಂಬರ್ 12ರಲ್ಲಿ ತೆರವಾಗಿರುವ ಸದಸ್ಯ ಸ್ಥಾನ ತುಂಬಲು ಉಪ ಚುನಾವಣೆ ಜರುಗಿಸುವ ಕುರಿತು ಚುನಾವಣಾ ವೇಳಾ ಪಟ್ಟಿಯನ್ನು ಹೊರಡಿಸಲಾಗಿದೆ.
ನವೆಂಬರ್ 4ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ನವಂಬರ್ 11 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ನವಂಬರ್ 12ರಂದು ನಾಮಪತ್ರಗಳನ್ನು ಪರಿಶೀಲನೆ ನಡೆಯಲಿದೆ. ನವೆಂಬರ್ 14ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕವಾಗಿದ್ದು, ನವೆಂಬರ್ 23 ರಂದು ಬೆಳಗ್ಗೆ 7 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಇದ್ದಲ್ಲಿ ನವೆಂಬರ್ 25ರಂದು ನಡೆಸಲಾಗುವುದು. ನವೆಂಬರ್ 26ರಂದು ಬೆಳಗ್ಗೆ 8 ಗಂಟೆಗೆ ಮತಗಳ ಎಣಿಕೆಯು ತಾಲ್ಲೂಕಿನ ಕೇಂದ್ರ ಸ್ಥಳದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
PublicNext
04/11/2024 08:31 am