ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ; ಜಿಲ್ಲಾ ಬಿಜೆಪಿ ಸ್ವಾಗತ

ಕಾರವಾರ (ಉತ್ತರಕನ್ನಡ): ಉತ್ತರಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿರುವುದನ್ನು ಜಿಲ್ಲಾ ಬಿಜೆಪಿ ಘಟಕ ಸ್ವಾಗತಿಸಿದೆ.

ಕಾರವಾರದ ಜಿಲ್ಲಾ ಪತ್ರಿಕಾಭವನದಲ್ಲಿ ಈ ಕುರಿತು ಆಯೋಜಿಸಲಾಗಿದ್ದ ಮಾದ್ಯಮಗೋಷ್ಠಿಯಲ್ಲಿ ಆಸ್ಪತ್ರೆ ನಿರ್ಮಿಸಿಕೊಡುವ ಭರವಸೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹಾಗೂ ಜಿಲ್ಲೆಯ ಎಲ್ಲ ಸಚಿವರು, ಶಾಸಕರು ಜನಪ್ರತಿನಿಧಿಗಳಿಗೆ ಬಿಜೆಪಿ ಜಿಲ್ಲಾ ವಕ್ತಾರ ನಾಗರಾಜ ನಾಯಕ ಅಭಿನಂದನೆ ಸಲ್ಲಿಸಿದ್ದಾರೆ.

ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆ ಬೇಕು ಎನ್ನುವುದು ಹಲವು ದಶಕಗಳ ಬೇಡಿಕೆಯಾಗಿದ್ದು ಈ ಬಗ್ಗೆ ಜಿಲ್ಲೆಯ ಜನಸಾಮಾನ್ಯರು ಸಾಕಷ್ಟು ಹೋರಾಟಗಳನ್ನ ಮಾಡಿದ್ದು ಜನಪ್ರತಿನಿಧಿಗಳು ಸಹ ಪೂರಕವಾಗಿ ಪ್ರಯತ್ನಿಸಿದ್ದಾರೆ. ಇದರ ಫಲವಾಗಿ ಇದೀಗ ಜಿಲ್ಲೆಯ ಮದ್ಯಭಾಗ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಸರ್ಕಾರ ಒಪ್ಪಿಗೆ ಸೂಚಿಸಿದ್ದು ಶೀಘ್ರದಲ್ಲೇ ನಿರ್ಮಾಣ ಮಾಡುವ ಭರವಸೆ ಇದೆ ಅಂತಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಜನರು ತುರ್ತು ಸಂದರ್ಭಗಳಲ್ಲಿ ಚಿಕಿತ್ಸೆಗಾಗಿ ನೆರೆಯ ಜಿಲ್ಲೆಗಳನ್ನ ಅವಲಂಭಿಸಿದ್ದು ಎಷ್ಟೋ ಮಂದಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮದ್ಯೆ ಕೊನೆಯುಸಿರೆಳೆದಿರುವ ಘಟನೆಗಳು ನಡೆದಿವೆ. ಈ ನಿಟ್ಟಿನಲ್ಲಿ ಜಿಲ್ಲೆಯ ಜನರ ದಶಕಗಳ ಬೇಡಿಕೆಯನ್ನ ಈಡೇರಿಸಲು ಸರ್ಕಾರದ ಮುಂದಾಗಿದ್ದು ಅವರನ್ನ ಅಭಿನಂದಿಸುವುದಾಗಿ ನಾಗರಾಜ ನಾಯಕ ತಿಳಿಸಿದ್ದಾರೆ.

Edited By : Manjunath H D
PublicNext

PublicNext

21/09/2022 03:20 pm

Cinque Terre

18.94 K

Cinque Terre

0

ಸಂಬಂಧಿತ ಸುದ್ದಿ