ಕಾರವಾರ (ಉತ್ತರಕನ್ನಡ): ಅಂತರರಾಷ್ಟ್ರೀಯ ಕಡಲತೀರ ಸ್ವಚ್ಚತಾ ದಿನದ ಅಂಗವಾಗಿ ಕಾರವಾರದ ಟ್ಯಾಗೋರ್ ಕಡಲತೀರದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಚತಾ ಕಾರ್ಯಕ್ಕೆ ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಸಮುದ್ರ ಪೂಜೆ ನಡೆಸುವ ಮೂಲಕ ಚಾಲನೆ ನೀಡಿದರು.
ಟ್ಯಾಗೋರ್ ತೀರಕ್ಕೆ ಅವರನ್ನು ಜಿಲ್ಲಾ ಪೊಲೀಸ್ ಬ್ಯಾಂಡ್ ಸ್ವಾಗತಿಸಿಕೊಂಡಿತು. ಬಳಿಕ ತೀರದಲ್ಲಿ ಸಮುದ್ರ ದೇವನಿಗೆ ಪೂಜೆ ಸಲ್ಲಿಸಿದರು. ವೈದಿಕರ ನೇತೃತ್ವದಲ್ಲಿ ನಡೆದ ಪೂಜೆಯಲ್ಲಿ ಸಮುದ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಬಳಿಕ ಸ್ವಚ್ಚತಾ ಸಲಕರಣೆಗಳನ್ನ ಸಂಘ- ಸಂಸ್ಥೆಗಳ ಪದಾಧಿಕಾರಿಗಳಿಗೆ ಹಸ್ತಾಂತರಿಸಿ ಸ್ವಚ್ಚತಾ ಕಾರ್ಯಕ್ಕೆ ಚಾಲನೆ ನೀಡಿದರು.
ಬಳಿಕ ನಾಲ್ಕು ಕಿ.ಮೀ. ಟ್ಯಾಗೋರ್ ಕಡಲತೀರದಲ್ಲಿ ಸುಮಾರು 5 ಸಾವಿರ ಮಂದಿಯಿಂದ ಸ್ವಚ್ಚತಾ ಕಾರ್ಯ ನಡೆಸಲಾಯಿತು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಪೆನ್ನೇಕರ್, ಜಿಲ್ಲಾ ಪಂಚಾಯತಿ ಸಿಇಒ ಪ್ರಿಯಾಂಗಾ ಎಂ. ಸೇರಿದಂತೆ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರು ಪಾಲ್ಗೊಂಡಿದ್ದರು.
PublicNext
17/09/2022 10:22 am