ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಹೋರಾಟ; ನೀ ಕೊಡೆ, ನಾ ಬಿಡೆ!

ಹಾವೇರಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಇಂದು ಸದನದ ಒಳಗೆ, ಸದನದ ಹೊರಗೆ ಪ್ರತಿಭಟನೆ ನಡೆಸುವ ಮೂಲಕ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲಾಗಿದೆ.

ಶಿಗ್ಗಾಂವ್ ನಲ್ಲಿ ಸಿಎಂ ನಿವಾಸದ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದ್ದು, ವಿಧಾನ ಸೌಧ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಲಾಗಿದೆ.

ಕೂಡಲ ಸಂಗಮದ ಜಯಮೃತ್ಯುಂಜಯ ಸ್ವಾಮಿಜಿ‌ ನೇತೃತ್ವದಲ್ಲಿ ಬೆಳಗ್ಗೆ ಶಿಗ್ಗಾಂವ್ ಪಟ್ಟಣದ ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನಾ rally ಆರಂಭ ಮಾಡಲಾಯಿತು. ಬೆಳಗ್ಗೆ ಒಂಬತ್ತು ಗಂಟೆಗೆ ಆರಂಭವಾಗಬೇಕಿದ್ದ ಮೆರವಣಿಗೆ, 11 ಗಂಟೆಯಾದರೂ ಜನ ಸೇರಿರಲಿಲ್ಲ. ಬಳಿಕ ಸಾವಿರಾರು ಸಂಖ್ಯೆಯಲ್ಲಿ ಜನರು rally ಯಲ್ಲಿ ಭಾಗವಹಿಸಿದ್ದರು. ಸುಮಾರು ಮೂರು ಕಿಲೋಮೀಟರ್ ನಷ್ಟು ದೂರ ಪಾದಯಾತ್ರೆ ನಡೆಸಿದ ಸ್ವಾಮೀಜಿ, ಸಿಎಂ ನಿವಾಸದೆದುರು ಹಾಕಿದ ವೇದಿಕೆಯಲ್ಲಿ ಮಾತನಾಡಿ, ಬಳಿಕ ಧರಣಿ ಸತ್ಯಾಗ್ರಹ ಆರಂಭಿಸಿದ್ರು.

ಸುಮಾರು ಮೂರು ಗಂಟೆಗಳ ಕಾಲ ನಿರಂತರವಾಗಿ ಪಾದಯಾತ್ರೆಯಲ್ಲಿ ಸಾಗಿದ ಸ್ವಾಮೀಜಿ‌, ಶಿಗ್ಗಾಂವ್- ಸವಣೂರು ಪಟ್ಟಣದ ನಡುವೆ ಇರುವ ಸಿಎಂ ನಿವಾಸದ ಎದುರು ಧರಣಿಯಲ್ಲಿ ಭಾಗವಹಿಸಿದ್ರು.

ಬೇರೆ ಬೇರೆ ಜಿಲ್ಲೆಯಿಂದ ಸಾವಿರಾರು ಜನರು ಧರಣಿಯಲ್ಲಿ ಪಾಲ್ಗೊಂಡಿದ್ದರು. ಸಿಎಂ ಬಸವರಾಜ್ ಬೊಮ್ಮಾಯಿ ಕೊಟ್ಟ ಮಾತಿಗೆ ತಪ್ಪಿದ್ದು, ಇಂದು ಸದನದಲ್ಲಿ ಮೀಸಲಾತಿ ವಿಚಾರದಲ್ಲಿ ಸ್ಪಷ್ಟಪಡಿಸಬೇಕು. ಇಲ್ಲದಿದ್ದರೆ, ನರಗುಂದ ಬಂಡಾಯದ ಮಾದರಿಯಲ್ಲಿ ಹೋರಾಟ ನಡೆಯಲಿದೆ ಎಂದು ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮಿಜಿ‌ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.‌

ಒಂದು ಕಡೆ ಸದನದಲ್ಲಿ ಯತ್ನಾಳ್, ಮೀಸಲಾತಿ ವಿಚಾರವನ್ನು ಪ್ರಸ್ತಾಪ ಮಾಡಿದರೇ ಇತ್ತ ಸಿಎಂ ಮನೆ ಮುಂದೆ ಧರಣಿ ಸತ್ಯಾಗ್ರಹ ಕೈಗೊಳ್ಳುವ ಮೂಲಕ ಸರ್ಕಾರವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದ್ದಾರೆ.

Edited By : Somashekar
PublicNext

PublicNext

20/09/2022 08:13 pm

Cinque Terre

35.85 K

Cinque Terre

2

ಸಂಬಂಧಿತ ಸುದ್ದಿ