ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೋವಾ- ಕರ್ನಾಟಕ ಅಧಿಕಾರಿಗಳೊಂದಿಗೆ ರಾಜ್ಯಪಾಲರ ಸಭೆ; ಮಾದಕ ವಸ್ತುಗಳ ನಿಯಂತ್ರಣಕ್ಕೆ ಸೂಚನೆ

ಕಾರವಾರ (ಉತ್ತರಕನ್ನಡ): ಗೋವಾ ಮತ್ತು ಕರ್ನಾಟಕ ನಡುವಿನ ಗಡಿ ಸಂಬಂಧವನ್ನು ಬಲಪಡಿಸುವ ನಿಟ್ಟಿನಲ್ಲಿ ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೈ ಮತ್ತು ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಇಂದು ದಕ್ಷಿಣ ಗೋವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗಡಿ ಜಿಲ್ಲೆಗಳ ಅಧಿಕಾರಿಗಳ ಜಂಟಿ ಸಭೆ ನಡೆಸಿದರು.

ಸಭೆಯಲ್ಲಿ ಗೋವಾ ರಾಜ್ಯಪಾಲರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಸರ್ವಶ್ರೇಷ್ಠರು. ಈ ನಿಟ್ಟಿನಲ್ಲಿ ಅಂತರರಾಜ್ಯ ಅಧಿಕಾರಿಗಳ ನಡುವಿನ ಚರ್ಚೆಗಳು ಸಾರ್ವಜನಿಕ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಸಾಮಾನ್ಯ ಜನರ ಹಿತಾಸಕ್ತಿಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವಲ್ಲಿ ಹೆಚ್ಚಿನ ಮಹತ್ವ ಪಡೆಯುತ್ತದೆ ಎಂದರು.

ಎರಡೂ ರಾಜ್ಯಗಳಲ್ಲಿ ಮಾದಕ ವಸ್ತು ಕಳ್ಳಸಾಗಣೆ ಸಮಸ್ಯೆ ಕುರಿತು ಪ್ರಸ್ತಾಪಿಸಿದ ಕರ್ನಾಟಕ ರಾಜ್ಯಪಾಲರು, ಮಾದಕ ವಸ್ತು ಕಳ್ಳಸಾಗಣೆ ತಡೆಯುವ ನಿಟ್ಟಿನಲ್ಲಿ ಉಭಯ ರಾಜ್ಯಗಳ ನಡುವೆ ಗಂಭೀರ ಚರ್ಚೆ ನಡೆಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಗಡಿ ಜಿಲ್ಲೆಗಳ ನಡುವಿನ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ದೆಹಲಿಯಲ್ಲಿ ನಡೆದ ರಾಜ್ಯಪಾಲರ ಸಮ್ಮೇಳನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, ಗಡಿ ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳ ಜಂಟಿ ಸಭೆ ನಡೆಸುವಂತೆ ತಿಳಿಸಿದ್ದರು. ಅದರಂತೆ ಕರ್ನಾಟಕ- ಗೋವಾ ರಾಜ್ಯಪಾಲರು ಸಭೆ ನಡೆಸಿದರು.

ಸಭೆಯಲ್ಲಿ ದಕ್ಷಿಣ ಗೋವಾ ಜಿಲ್ಲಾಧಿಕಾರಿ ಜ್ಯೋತಿಕುಮಾರಿ, ಉತ್ತರ ಗೋವಾ ಜಿಲ್ಲಾಧಿಕಾರಿ ಮಮು ಹಾಗೆ, ಉತ್ತರ ಗೋವಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ದೇಸಾಯಿ, ದಕ್ಷಿಣ ಗೋವಾ ಪೊಲೀಸ್ ವರಿಷ್ಠಾಧಿಕಾರಿ ಅಭಿಶೇಕ ಧನಿಯಾ, ಬೆಳಗಾವಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್, ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಪಾಟೀಲ್, ಉತ್ತರಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಪೆನ್ನೇಕರ್, ಉತ್ತರಕನ್ನಡ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಮತ್ತಿತರರು ಪಾಲ್ಗೊಂಡಿದ್ದರು.

Edited By : Nirmala Aralikatti
Kshetra Samachara

Kshetra Samachara

18/09/2022 07:12 am

Cinque Terre

2.52 K

Cinque Terre

0