ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರವಾರ: ಸ್ಮಶಾನ ಕಾರ್ಮಿಕರಿಗೆ ಕಾಯಂ ಸಮಾನ ವೇತನ; ಸಚಿವ ಪೂಜಾರಿ

ಕಾರವಾರ : ರಾಜ್ಯದ ವಿವಿಧ ಸ್ಮಶಾನಗಳಲ್ಲಿ ಬಹು ವರ್ಷಗಳಿಂದ ದುಡಿಯುತ್ತಿರುವ ಕಾರ್ಮಿಕರಿಗೆ ಕಾಯಂ ಸಮಾನ ವೇತನ ನೀಡುವ ಸಂಬಂಧ ಪ್ರಸ್ತಾವನೆ ಸಿದ್ಧಪಡಿಸುವಂತೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿಂದು ಸ್ಮಶಾನ ಕಾರ್ಮಿಕರರೊಂದಿಗೆ ಸಭೆ ನಡೆಸಿ ಅವರ ಕುಂದುಕೊರತೆಗಳನ್ನು ಆಲಿಸಿದ ಬಳಿಕ ಅವರು, ಸ್ಮಶಾನ ಕಾರ್ಮಿಕರು ಸ್ಮಶಾನಗಳಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಕಾರ್ಮಿಕ ವರ್ಗವಾಗಿದೆ. ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸುಮಾರು 200 ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು ಕೇವಲ ಇಬ್ಬರು ಮಾತ್ರ ಕಾಯಂ ಸಿಬ್ಬಂದಿಯಾಗಿದ್ದಾರೆ. ಉಳಿದ 148 ಸಿಬ್ಬಂದಿಗೆ ನೇರ ವೇತನ ಪಡೆಯುತ್ತಿದ್ದು, ಅವರನ್ನು ಖಾಯಂ ಗೊಳಿಸುವ ಅಥವಾ ಅವರಿಗೆ ಖಾಯಂ ಹುದ್ದೆಯ ಸಮಾನ ವೇತನ ನೀಡುವ ಬಗ್ಗೆ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸುವಂತೆ ಸಚಿವರು ಸೂಚಿಸಿದರು.

ಅಲ್ಲದೆ, ಪ್ರತಿ ಕಂದಾಯ ಗ್ರಾಮಕ್ಕೊಂದು ಸ್ಮಶಾನ ಇರಬೇಕೆಂದು ಪ್ರಸ್ತಾವನೆ ಇದೆ. ಅಲ್ಲದೆ ಮಹಾನಗರ ಪಾಲಿಕೆಗಳು, ನಗರಸಭೆ, ಪಟ್ಟಣ ಪಂಚಾಯ್ತಿ, ಪುರಸಭೆ, ಗ್ರಾಮ ಪಂಚಾಯ್ತಿ ಗಳಲ್ಲಿನ ಸ್ಮಶಾನಗಳಲ್ಲಿ ಕೆಲಸ ನಿರ್ವಹಿಸುವವರ ಮಾಹಿತಿಯನ್ನು ಕ್ರೂಢಿಕರಿಸಿ ಅವರ ಕಲ್ಯಾಣಕ್ಕೆ ಕಾರ್ಯಕ್ರಮ ರೂಪಿಸುವ ಸಂಬಂಧ ಪ್ರಸ್ತಾವನೆಯನ್ನು ಸಿದ್ಧಪಡಿಸುವಂತೆ ಹಾಗೂ ಈ ಸಂಬಂಧ ಶೀಘ್ರವೇ ಸಂಬಂಧಿಸಿದ ಇಲಾಖೆಗಳ ಉನ್ನತ ಅಧಿಕಾರಿಗಳ ಸಭೆ ಕರೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

Edited By : Shivu K
PublicNext

PublicNext

19/09/2022 12:36 pm

Cinque Terre

23.31 K

Cinque Terre

0

ಸಂಬಂಧಿತ ಸುದ್ದಿ