ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರವಾರ: ಉತ್ತರಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ; ಸಕಾರಾತ್ಮಕ ತೀರ್ಮಾನದ ಭರವಸೆ ನೀಡಿದ ಆರೋಗ್ಯ ಸಚಿವ

ಕಾರವಾರ: ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವ ಪ್ರಸ್ತಾವ ಸರ್ಕಾರದ ಮುಂದಿದ್ದು, ಸೂಕ್ತ ಜಾಗದೊಂದಿಗೆ ಸಕಾರಾತ್ಮಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಕಾರವಾರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ವೈದ್ಯಕೀಯ ಸಿಬ್ಬಂದಿ ನೇಮಕ, ಮೂಲಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಅಲ್ಲದೆ ಜಿಲ್ಲೆಯ ವಿವಿಧ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗಿದ್ದು, ಕರಾವಳಿ, ಮಲೆನಾಡು ಹಾಗೂ ಬಯಲುಸೀಮೆ ಹೊಂದಿರುವ ಉತ್ತರ ಕನ್ನಡ ಜಿಲ್ಲೆಗೆ ಆರೋಗ್ಯ ಇಲಾಖೆ ವಿಷಯದಲ್ಲಿ ವಿಶೇಷ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ವಿಧಾನಮಂಡಲ ಅಧಿವೇಶನ ಬಳಿಕ ಒಂದು ದಿನ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಗುರುತಿಸಿರುವ ಜಾಗಗಳ ವೀಕ್ಷಣೆ ಮಾಡಲಾಗುವುದು. ಅಲ್ಲದೆ, ಕಾರವಾರ ವೈದ್ಯಕೀಯ ಕಾಲೇಜು ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ಸೌಲಭ್ಯ ಒದಗಿಸುವ ಬಗ್ಗೆ ಖುದ್ದು ಪರಿಶೀಲನೆ ಮಾಡಲು ತೀರ್ಮಾನಿಸಿರುವುದಾಗಿ ಸಚಿವರು ತಿಳಿಸಿದ್ದಾರೆ.

Edited By :
PublicNext

PublicNext

20/09/2022 03:21 pm

Cinque Terre

18.35 K

Cinque Terre

0

ಸಂಬಂಧಿತ ಸುದ್ದಿ