ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರವಾರ: ಪರಿಶಿಷ್ಟ ಪಂಗಡ ಸೇರ್ಪಡೆಗೆ ವಿಳಂಬ ಧೋರಣೆ; ಕುಣಬಿಗರಿಂದ ಬೃಹತ್ ಹೋರಾಟ ಸಿದ್ಧತೆ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಣಬಿ ಬುಡಕಟ್ಟು ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಸರ್ಕಾರಗಳು ವಿಳಂಬ ನೀತಿ ಅನುಸರಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲು ಕುಣಬಿ ಸಮಾಜ ಅಣಿಯಾಗಿದೆ.

ಜಿಲ್ಲೆಯಲ್ಲಿ ಕುಣಬಿಗರು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದೆ. ಅರಣ್ಯ ಉತ್ಪನ್ನಗಳನ್ನೇ ನಂಬಿ ಜೀವನ ನಡೆಸುತ್ತಿರುವ ಈ ಬುಡಕಟ್ಟು ಸಮುದಾಯವನ್ನು 33 ವರ್ಷಗಳಿಂದ ಬುಡಕಟ್ಟು ಪಂಗಡ ಪಟ್ಟಿಗೆ ಸೇರಿಸಿಕೊಳ್ಳಲು ಹಾಗೂ ಕುಣಬಿಗರ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕತೆಯ ಅಭಿವೃದ್ಧಿಗಾಗಿ ಸರಕಾರಕ್ಕೆ ಒತ್ತಾಯಿಸಿ ಹೋರಾಟ ಮಾಡುತ್ತಾ ಬಂದಿದ್ದರೂ ಸರ್ಕಾರಗಳು ಕಿವಿಗೊಡದಿರುವುದು ಕುಣಬಿಗರ ಬೇಸರಕ್ಕೆ ಕಾರಣವಾಗಿದೆ.

ಗೋವಾದಲ್ಲಿ 2007ರಲ್ಲೇ ಅಲ್ಲಿನ ಕುಣಬಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ. ಆದರೆ, ಕರ್ನಾಟಕದಲ್ಲಿ ಅನ್ಯಾಯ ಮಾಡಲಾಗುತ್ತಿದೆ. ಈಗಾಗಲೇ ‘ಬೆಟ್ಟ ಕುರುಬ' ಸಮುದಾಯವನ್ನು ಪರಿಶಿಷ್ಠ ಪಂಗಡಕ್ಕೆ ಸೇರ್ಪಡೆಗೊಳಿಸಲು ಕೇಂದ್ರ ಸಚಿವ ಸಂಪುಟ ತೀರ್ಮಾನಿಸಿದ್ದು, ಕುಣಬಿಗರನ್ನು ಕಡೆಗಣಿಸಲಾಗಿದೆ.

ಹೀಗಾಗಿ ಕುಣಬಿಗರನ್ನೂ ಪರಿಶಿಷ್ಠ ಪಂಗಡಕ್ಕೆ ಸೇರಿಸಲು ತಕ್ಷಣ ಕ್ರಮ ಕೈಗೊಳ್ಳಲು ಒತ್ತಾಯಿಸಿ ಜಿಲ್ಲೆಯಾದ್ಯಂತ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಕುಣಬಿಗರು ಸೇರಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಸಮುದಾಯದ ಪ್ರಮುಖರು ತಿಳಿಸಿದ್ದಾರೆ.

Edited By : Shivu K
PublicNext

PublicNext

25/09/2022 09:12 pm

Cinque Terre

28.37 K

Cinque Terre

0

ಸಂಬಂಧಿತ ಸುದ್ದಿ