ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರವಾರ: ದೇಶ ವಿರೋಧಿ ಸಂಘಟನೆಗಳ ವಿರುದ್ಧ ಸೂಕ್ತ ಸಂದರ್ಭದಲ್ಲಿ ಸೂಕ್ತ ಕ್ರಮ: ಸಚಿವ ಹೆಬ್ಬಾರ್

ಕಾರವಾರ (ಉತ್ತರಕನ್ನಡ): ದೇಶ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಎಲ್ಲಾ ಸಂಘಟನೆಗಳ ವಿರುದ್ಧ ಸರ್ಕಾರ ಸೂಕ್ತ ಸಂದರ್ಭದಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತದೆ. ಇಂಥವರ ವಿರುದ್ಧ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.

ಪಿಎಫ್ಐ ಬ್ಯಾನ್ ವಿಚಾರವಾಗಿ ಕಾರವಾರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಾವ ಜಾತಿ, ಧರ್ಮ, ವರ್ಗ ಸಂಬಂಧವಿಲ್ಲ. ದೇಶ ವಿರೋಧಿ ಚಟುವಟಿಕೆಗಳಿಗೆ ಕೈ ಹಾಕುವಂಥ ಸಂಘಟನೆಗಳ ವಿರುದ್ಧ ಸರ್ಕಾರ ಸೂಕ್ತ ನಿರ್ಣಯ ತೆಗೆದುಕೊಳ್ಳಬೇಕಾಗುತ್ತದೆ. ಆ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಣಯ ಕೈಗೊಂಡಿದೆ ಎಂದರು.

ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಾಚರಣೆ ಆಗಲಿದೆ‌. ದೇಶಕ್ಕೆ ವಿರೋಧ ಮಾಡುವವರ ಪರ ಯಾವುದೇ ಕಾರಣಕ್ಕೂ ನಿಲ್ಲಲಾಗಲ್ಲ ಎಂದ ಅವರು, ಪ್ರತಿಭಟನೆ ಅವರ ಹಕ್ಕು. ದೇಶ ರಕ್ಷಣೆ ನಮ್ಮ ಕರ್ತವ್ಯ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Edited By : Shivu K
PublicNext

PublicNext

28/09/2022 03:32 pm

Cinque Terre

27.07 K

Cinque Terre

0

ಸಂಬಂಧಿತ ಸುದ್ದಿ