ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರವಾರ: ವಿಧಾನಸಭಾಧ್ಯಕ್ಷರ ಕಚೇರಿ ಎದುರು ಅರಣ್ಯ ಅತಿಕ್ರಮಣದಾರರ ಪ್ರತಿಭಟನೆ

ಕಾರವಾರ (ಉತ್ತರಕನ್ನಡ): ಅರಣ್ಯ ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸದಂತೆ ಶಿರಸಿಯಲ್ಲಿ ಅರಣ್ಯ ಅತಿಕ್ರಮಣದಾರರಿಂದ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ವಿಧಾನಸಭಾಧ್ಯಕ್ಷ ಹಾಗೂ ಶಿರಸಿ ಕ್ಷೇತ್ರದ ಶಾಸಕರ ಕಚೇರಿ ಎದುರು ಧರಣಿ ನಡೆಸಿ, ಹಕ್ಕಿಗಾಗಿ ಅತಿಕ್ರಮಣದಾರರು ಆಗ್ರಹಿಸಿದ್ದಾರೆ.

ಶಿರಸಿಯ ಬಿಡ್ಕಿಬೈಲಿನ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಹೋರಾಟಕ್ಕೆ ಮಾಜಿ ಸಭಾಪತಿ ಕಾಗೋಡು ತಿಮ್ಮಪ್ಪ ಚಾಲನೆ ನೀಡಿದರು. ಮೂರು ಎಕರೆಗಿಂತ ಕಡಿಮೆಯಿರುವ ರೈತರನ್ನು ಒಕ್ಕಲ್ಲೆಬ್ಬಿಸದಂತೆ ಜಿಲ್ಲಾ ಅರಣ್ಯ ಅತಿಕ್ರಮಣದಾರರ ಹೋರಾಟ ಸಮಿತಿ ಅಧ್ಯಕ್ಷ ರವೀಂದ್ರ ನಾಯ್ಕ ಆಗ್ರಹಿಸಿದ್ದಾರೆ.

ಇನ್ನು ಈ ಪ್ರತಿಭಟನೆಯಲ್ಲಿ ಸಾವಿರಾರು ಜನ ಅರಣ್ಯ ಅತಿಕ್ರಮಣದಾರರು ಪಾಲ್ಗೊಂಡಿದ್ದರು. ಪ್ರತಿಭಟನೆಗೆ ಚಾಲನೆ ನೀಡಿ ಸಾಥ್ ನೀಡಿದ ಮಾಜಿ ಸಭಾಪತಿ ಕಾಗೋಡು ತಿಮ್ಮಪ್ಪ, ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಅರಣ್ಯ ಅತಿಕ್ರಮಣದಾರರ ವಿರುದ್ಧ ಇರುವ ನೀತಿಯನ್ನು ಖಂಡಿಸಿದರು.

ಇನ್ನು ಶಿರಸಿಯ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಹೋರಾಟಗಾರರು, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಮನವಿ ಸಲ್ಲಿಸಿದ್ದಾರೆ. ಹೋರಾಟದ ಹಾದಿ ತೀವ್ರವಾಗುವ ಮುನ್ನ ಸರ್ಕಾರ ಅರಣ್ಯ ಅತಿಕ್ರಮಣದಾರರ ಪರವಾಗಿ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ.

Edited By : Nagesh Gaonkar
PublicNext

PublicNext

03/10/2022 06:40 pm

Cinque Terre

23.06 K

Cinque Terre

0

ಸಂಬಂಧಿತ ಸುದ್ದಿ