ಕಾರವಾರ (ಉತ್ತರಕನ್ನಡ): ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿಯ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿ ಅವರಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೇಳಿದ್ದಾರೆ.
ಪರೇಶ್ ಮೇಸ್ತಾ ಸಾವಿನ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ನೀಡಿರುವ ಅವರು, ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ.
ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ ಎಂದಿದ್ದಾರೆ.
PublicNext
04/10/2022 07:47 am