ಕಾರವಾರ: ರಾಜ್ಯದ ಹಲವು ಮೊರಾರ್ಜಿ ವಸತಿ ಶಾಲೆಗಳಲ್ಲಿRSS ಕಾರ್ಯಕರ್ತರಿಗೆ ತಾಲೀಮು ಶಿಬಿರ ನಡೆಸಲು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರು ಅವಕಾಶ ನೀಡಿದ್ದಾರೆಂದು ಆರೋಪಿಸಿರುವ ಎಸ್ಎಫ್ಐ ಜಿಲ್ಲಾ ಸಂಚಾಲಕ ಗಣೇಶ ರಾಠೋಡ, ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೂತಾಂಡಹಳ್ಳಿಯಲ್ಲಿರುವ ಸರ್ಕಾರದ ಕ್ರೈಸ್ಟ್ ಸಂಸ್ಥೆಯ ವಸತಿ ನಿಲಯವನ್ನು ಅ.9ರಿಂದ 15ರವರೆಗೆ ಒಟ್ಟು 9 ದಿನಗಳ ಕಾಲ ಸಂಘ ಪರಿವಾರದ ತಾಲೀಮು ಶಿಬಿರ ನಡೆಸಲು ಸ್ವತಃ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರೇ ಬಿಟ್ಟು ಕೊಡಲು ಶಿಫಾರಸ್ಸು ಮಾಡಿರುವುದು ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರ್ಎಸ್ಎಸ್ ಕೋಲಾರ ವಿಭಾಗ ಪ್ರಶಿಕ್ಷಣ ಶಿಬಿರವನ್ನು ನಡೆಸಲು ಕರ್ನಾಟಕ ಸರ್ಕಾರವೇ ಸರ್ಕಾರಿ ವಸತಿ ಶಾಲೆಗಳನ್ನು ಬಳಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸುವ ಮೂಲಕ ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳನ್ನು ಸಂಘ ಪರಿವಾರದ ತರಬೇತಿ ತಾಣಗಳನ್ನಾಗಿ ಮಾರ್ಪಡಿಸಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.
Kshetra Samachara
11/10/2022 12:49 pm