ಕಾರವಾರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವ ಡಾ.ಸುಧಾಕರ್ ಇಂದು ಕಾರವಾರಕ್ಕೆ ಭೇಟಿ ನೀಡಿ, ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗೋವಾ ಮಾರ್ಗವಾಗಿ ಕಾರವಾರಕ್ಕೆ ಭೇಟಿ ನೀಡಿದ ಅವರು, ಮೊದಲಿಗೆ ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ 450 ಹಾಸಿಗೆಯ ಆಸ್ಪತ್ರೆಯ ಕಟ್ಟಡದ ಕಾಮಗಾರಿಯನ್ನು ಪರಿಶೀಲಿಸಿದರು. ಕಟ್ಟಡದ ಒಳಗೆಲ್ಲ ಸುತ್ತಾಡಿ, ಕಾಮಗಾರಿಗಳನ್ನ ಪರಿಶೀಲಿಸಿದರು. ನಿರ್ಮಾಣ ಗುತ್ತಿಗೆ ಪಡೆದಿರುವ ಬಿಎಸ್‌ಆರ್ ಇನ್ಫಾçಟೆಕ್ ಕಂಪನಿಯ ಅಧಿಕಾರಿಗಳು ಹಾಗೂ ಜಿಲ್ಲಾ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಶಾಸಕರಿಂದ ಮಾಹಿತಿ ಪಡೆದು, ಗುಣಮಟ್ಟದ ಕಾಮಗಾರಿ ನಡೆಸಲು ಗುತ್ತಿಗೆಯವರಿಗೆ ಸೂಚಿಸಿದರು.
ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರ ವಸತಿ ನಿಲಯದ ಲಿಫ್ಟ್ ಉದ್ಘಾಟಿಸಿದ ಅವರು, ಹಾಸ್ಟೆಲ್‌ನ ಕೋಣೆಗಳಿಗೆ ತೆರಳಿ ಪರಿಶೀಲಿಸಿದರು. ನಂತರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ರೋಗಿಗಳೊಂದಿಗೆ ಆಸ್ಪತ್ರೆಯಲ್ಲಿನ ಚಿಕಿತ್ಸಾ ವ್ಯವಸ್ಥೆಯ ಬಗ್ಗೆ ಮಾತುಕತೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಜಿಲ್ಲಾ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.
ಈ ವೇಳೆ ಮೆಡಿಕಲ್ ಕಾಲೇಜಿಗೆ ಎಂಆರ್‌ಐ ಮಶೀನನ್ನು ಸ್ಥಳದಲ್ಲೇ ಮಂಜೂರಿಸಲಾಗಿದೆ. ಜೊತೆಗೆ ಕ್ರಿಮ್ಸ್ನಲ್ಲಿ ಸೂಪರ್ ಸ್ಪೆಷಾಲಿಟಿ ವ್ಯವಸ್ಥೆ ತರಲು ಹಬ್ ಆ್ಯಂಡ್ ಸ್ಪೋಕ್ ಮಾದರಿಯನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದು ತಿಳಿಸಿದರು.
PublicNext
11/10/2022 06:54 pm