ಸಿದ್ದಾಪುರ : ಬಡಗುತಿಟ್ಟಿನ ಪ್ರಸಿದ್ಧ ಯಕ್ಷಗಾನ ಭಾಗವತ ಕೇಶವ ಹೆಗಡೆ ಕೊಳಗಿಯವರಿಗೆ ಶುಕ್ರವಾರ ವಿಧಾನ ಸೌಧದಲ್ಲಿ ನಡೆದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಮುಂತಾದ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.
ಬಡಗುತಿಟ್ಟಿನ ಯಕ್ಷಗಾನ ರಂಗ ಮತ್ತು ಉತ್ತರ ಕನ್ನಡ ಜಿಲ್ಲೆಗೆ ಸಂದಿರುವ ಏಕೈಕ ರಾಜ್ಯೋತ್ಸವ ಪ್ರಶಸ್ತಿ ಇದಾಗಿದ್ದು ಯಕ್ಷಗಾನ ಅಭಿಮಾನಿಗಳು, ಜಿಲ್ಲೆಯ ಜನತೆ ಸಂಭ್ರಮಿಸಿದರು.
Kshetra Samachara
02/11/2024 02:04 pm