ಕಾರವಾರ (ಉತ್ತರಕನ್ನಡ): ಧಾರವಾಡದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಉತ್ತರ ಕನ್ನಡ ಜಿಲ್ಲೆಯಿಂದ ಸ್ಪರ್ಧಿಸಿದ್ದ ನಿವೇದಿತಾ ಸಾವಂತ, 13.42 ಮೀಟರ್ ದೂರಕ್ಕೆ ಗುಂಡು ಎಸೆಯುವ ಮೂಲಕ ಹಾಗೂ 41.34 ಮೀಟರ್‌ಗೆ ಡಿಸ್ಕಸ್ ಎಸೆಯುವ ಮೂಲಕ ಎರಡೂ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಈ ಮೂಲಕ ಎರಡು ಚಿನ್ನದ ಪದಕಗಳನ್ನು ಪಡೆದು, ಇದೇ ಬರುವ 25ರಿಂದ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ಉತ್ತರ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾಳೆ.
ಡಿಸ್ಕಸ್ ಎಸೆತ ಸ್ಪರ್ಧೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ನಿವೇದಿತಾ, ಈ ಹಿಂದೆ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿಯೂ ಚಿನ್ನದ ಪದಕಗಳನ್ನು ಪಡೆದು ಸಾದನೆ ಮಾಡಿದ್ದರು. ಇತ್ತೀಚಿಗೆ ಬೆಂಗಳೂರಿನ ಕಂಠರವ ಕ್ರೀಡಾಂಗಣದಲ್ಲಿ ನಡೆದ ಮುಕ್ತ ಮಹಿಳೆಯರ ಡಿಸ್ಕಸ್ ಎಸೆತ ಸ್ಪರ್ಧೆಯಲ್ಲಿ ನಿವೇದಿತಾ ಚಿನ್ನದ ಪದಕವನ್ನು ಪಡೆದಿದ್ದು, ಈ ಬಾರಿ ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪದಕ ಗೆಲ್ಲುವ ವಿಶ್ವಾಸ ಹೊಂದಿದ್ದಾರೆ. ಕಾರವಾರದ ಅಥ್ಲೆಟಿಕ್ಸ್ ತರಬೇತುದಾರ ಪ್ರಕಾಶ ರೇವಣಕರ ಅವರಿಗೆ ತರಬೇತಿ ನೀಡಿದ್ದಾರೆ. ನಿವೇದಿತಾ ಕ್ರೀಡಾ ಕೋಟಾದಡಿಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದು ಪ್ರಸ್ತುತ ಟಿಸಿಎಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
PublicNext
22/09/2022 04:41 pm