ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸಪೇಟೆ: ಅರ್ಥಪೂರ್ಣ, ಅದ್ಧೂರಿ ಹಂಪಿ ಉತ್ಸವಕ್ಕೆ ತೀರ್ಮಾನ - ಜಮೀರ್ ಅಹ್ಮದ್ ಖಾನ್

ಹೊಸಪೇಟೆ : 2025ರ ಹಂಪಿ ಉತ್ಸವವನ್ನೂ ಸಹ ಪ್ರತಿವರ್ಷದಂತೆ ಈ ವರ್ಷವೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಅಂತ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ರು.

ಬೆಂಗಳೂರಿನ ವಿಧಾನಸೌಧದಲ್ಲಿ ಸಭೆಯ ನಂತರ ಮಾತನಾಡಿದ ಅವರು, ಪ್ರವಾಸೋದ್ಯಮ ಸಚಿವರಾದ ಎಚ್. ಕೆ. ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರ ಸಲಹೆ -ಸೂಚನೆ ಪಡೆಯಲಾಗಿದೆ. ಎರಡೂ ಇಲಾಖೆಗಳ ಅಧಿಕಾರಿಗಳ ಅಭಿಪ್ರಾಯ ಸಹ ಪಡೆಯಲಾಗಿದೆ. ಜಿಲ್ಲೆಯ ಸಮಸ್ತ ಜನಪ್ರತಿನಿಧಿಗಳ ಸಹಕಾರ ಮತ್ತು ಸಹಭಾಗಿತ್ವ ದೊಂದಿಗೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಉತ್ಸವ ಯಶಸ್ವಿ ಮಾಡುತ್ತೇವೆ. ಜಿಲ್ಲಾಧಿಕಾರಿ ದಿವಾಕರ್ ಈಗಾಗಲೇ ಸಿದ್ಧತೆ ಆರಂಭಿಸಿದ್ದು ಎಲ್ಲ ಅಚ್ಚುಕಟ್ಟಾಗಿ ರೂಪಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

Edited By : Nagaraj Tulugeri
Kshetra Samachara

Kshetra Samachara

04/02/2025 09:47 pm

Cinque Terre

3.82 K

Cinque Terre

0

ಸಂಬಂಧಿತ ಸುದ್ದಿ