ಕೂಡ್ಲಿಗಿ: ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ತಾವೇ ಆರಂಭಿಸಿದ ಮನೆ ಬಾಗಿಲಿಗೆ ಶಾಸಕರು ಅನ್ನೋ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು.
ಬಳಿಕ ಮಾತನಾಡಿದ ಶಾಸಕ ಶ್ರೀನಿವಾಸ್, ರಾಜ್ಯದಲ್ಲಿ ಇಲ್ಲಿಯವರೆಗೆ ಯಾವೊಬ್ಬ ರಾಜಕಾರಣಿಯೂ ಮನೆ ಬಾಗಿಲಿಗೆ ಶಾಸಕರು ಅನ್ನೋ ವಿನೂತನ ಕಾರ್ಯಕ್ರಮವನ್ನ ಮಾಡಿಲ್ಲ. ಹೀಗಾಗಿ ತೀರಾ ಹಿಂದೂಳಿದ ಹಣೆ ಪಟ್ಟಿ ಕಟ್ಟಿಕೊಂಡಿರೋ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಜನರ ಸಮಸ್ಯೆ ಕ್ಲೀಯರ್ ಮಾಡಲು ನಾನೇ ಖುದ್ದು ಜನರ ಮನೆಗೆ ತೆರಳುತ್ತೇನೆ. ಜನರ ಸಮಸ್ಯೆ ಆಲಿಸಿ ಸ್ಥಳದಲ್ಲಿಯೇ ಪರಿಹರಿಸುವ ಕೆಲಸ ಮಾಡುತ್ತೇನೆ. ಅಷ್ಟೇ ಅಲ್ಲದೇ ಸರ್ಕಾರದ ಹತ್ತಾರು ಯೋಜನೆಗಳು ಜಾರಿಯಲ್ಲಿವೆ. ಅವುಗಳನ್ನ ಜನರಿಗೆ ಮುಟ್ಟಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಅಂತ ಶ್ರೀನಿವಾಸ್ ಹೇಳಿದ್ರು. ಅಷ್ಟೇ ಅಲ್ಲದೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವೇಳೆ ಗ್ಯಾರಂಟಿ ಯೋಜನೆಗಳು, ವಿಧವಾ ವೇತನ, ಪಿಂಚಣಿ, ಪಡಿತರ ಸೇರಿದಂತೆ ಹತ್ತಾರು ಸಮಸ್ಯೆಗಳಿಗೆ ಪರಿಹಾರ ನೀಡಿದ್ರು. ಕೂಡ್ಲಿಗಿ ಶಾಸಕ ಶ್ರೀನಿವಾಸ್ ಆರಂಭಸಿದ ಈ ಕಾರ್ಯ ಕಡಿಮೆ ಸಮಯದಲ್ಲಿ ಜನಮನ್ನಣೆ ಪಡೆಯುತ್ತಿದೆ.
Kshetra Samachara
08/01/2025 01:22 pm