ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಲಕಿಯ ಮೃತದೇಹ ಎಳೆದಾಡಿದ ನಾಯಿ : ಹೆತ್ತವರ ಆಕ್ರೋಶ

ಲಕ್ನೋ (ಉತ್ತರಪ್ರದೇಶ): ಇಲ್ಲಿನ ಸರ್ಕಾರಿ ಆಸ್ಪತ್ರೆಯೊಂದರ ಸ್ಟ್ರೆಚರ್ ನಲ್ಲಿದ್ದ ಬಾಲಕಿಯ ಮೃತದೇಹವನ್ನು ನಾಯಿಯೊಂದು ಎಳೆದು ತಿನ್ನುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉತ್ತರಪ್ರದೇಶದ ಸಂಬಾಲ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ಹೃದಯವಿದ್ರಾವಕ ವೀಡಿಯೋ ನೋಡಿದ ನೆಟ್ಟಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಲಕಿ ಅಪಘಾತದಲ್ಲಿ ಮೃತಪಟ್ಟಿದ್ದಳು. ಈ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆಗೆ ಆಕೆಯ ಮೃತದೇಹವನ್ನು ಸಂಬಾಲ್ ಜಿಲ್ಲಾಸ್ಪತ್ರೆಗೆ ತರಲಾಗಿತ್ತು. ಈ ವೇಳೆ ಸ್ಟ್ರೆಚರ್ ನಲ್ಲಿ ಇರಿಸಲಾಗಿದ್ದ ಮೃತದೇಹವನ್ನು ನಾಯಿ ಎಳೆದು ತಿಂದಿದೆ. ಈ ಘಟನೆಯನ್ನು ನೋಡುತ್ತಿದ್ದ ವ್ಯಕ್ತಿಯೊಬ್ಬ ತನ್ನ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾನೆ. ಈ ಮೂಲಕ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯತನವನ್ನು ಬಹಿರಂಗಪಡಿಸಿದ್ದಾನೆ.

Edited By : Nagaraj Tulugeri
PublicNext

PublicNext

27/11/2020 11:31 am

Cinque Terre

67.98 K

Cinque Terre

9

ಸಂಬಂಧಿತ ಸುದ್ದಿ