ನವದೆಹಲಿ: ಹಿಂದಿಯ ಜೂಲಿ ಜೂಲಿ ಸಾಂಗ್‌ಗೆ ಅದ್ಭುತವಾಗಿ ಡ್ಯಾನ್ಸ್ ಮಾಡಿದ ಸೆಕ್ಯೂರಿಟಿ ಗಾರ್ಡ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಜೆಎನ್‌ಯು ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಇವರು 1987ರಲ್ಲಿ ರಿಲೀಸ್ ಆದ 'ಜೀತೆ ಹೇ ಶಾನ್' ಮೂವಿಯ ಹಾಡಿಗೆ ಅದ್ಭುತವಾಗಿ ಹೆಜ್ಜೆ ಹಾಕಿದ್ದಾರೆ. ಜೆಎನ್‌ಯು ಡ್ಯಾನ್ಸ್ ಕ್ಲಬ್‌ನಲ್ಲಿ ರಿಹರ್ಸಲ್ ನಡೆಯುತ್ತಿದ್ದ ವೇಳೆ ಸೆಕ್ಯೂರಿಟಿ ಗಾರ್ಡ್ ತನ್ನ ಪ್ರತಿಭೆ ಪ್ರದರ್ಶಿಸಿದ್ದಾರೆ. ಇವರ ಡ್ಯಾನ್ಸ್ ನೋಡಿ ಅಲ್ಲಿದ್ದ ವಿದ್ಯಾರ್ಥಿಗಳು ಚಪ್ಪಾಳೆ ತಟ್ಟಿ ಶಿಳ್ಳೆ ಹೊಡೆದು ಪ್ರೋತ್ಸಾಹಿಸಿದ್ದಾರೆ.
PublicNext
11/12/2021 06:58 pm