ಬೆಂಗಳೂರು: ನಿವೃತ್ತ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (ಕೆಇಆರ್‌ಸಿ) ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.
ರವಿಕುಮಾರ್ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ಮೇ 31 ರಂದು ನಿವೃತ್ತರಾಗಿದ್ದರು. ಕೆಇಆರ್‌ಸಿ ಅಧ್ಯಕ್ಷರ ಹುದ್ದೆಯ ಅವಧಿ 5 ವರ್ಷ ಅಥವಾ ವಯಸ್ಸು 65 ತುಂಬುವರೆಗೆ ಇರುತ್ತದೆ.
ಕೆಇಆರ್‌ಸಿ ಅಧ್ಯಕ್ಷರ ಆಯ್ಕೆಗೆ ಸಮಿತಿ ನೇಮಿಸಲಾಗಿತ್ತು. ರವಿಕುಮಾರ್ ಸೇರಿದಂತೆ ಹಲವರು ಅರ್ಜಿ ಸಲ್ಲಿಸಿದ್ದರು. ನೇಮಕಾತಿ ಸಮಿತಿ ಶಿಫಾರಸಿನಂತೆ ರವಿಕುಮಾರ್ ಅವರನ್ನು ಆಯ್ಕೆ ಮಾಡಿ ಇಂಧನ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ. ಮುಂದಿನ ಐದು ವರ್ಷಗಳ ಅವಧಿಗೆ ಅವರು ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
PublicNext
07/06/2022 09:54 am