ವರದಿ: ಅರಕೇಶ್. ಎಸ್, ರಾಮನಗರ
ರಾಮನಗರ: ರಾಮನಗರ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಬಹುತೇಕ ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ.
ಇದರಿಂದ ಚನ್ನಪಟ್ಟಣ ತಾಲ್ಲೂಕಿನ ಕಣ್ವಾ ಜಲಾಶಯದ ಒಳ ಹರಿವು ಕೂಡ ಹೆಚ್ಚಾಗಿದೆ. ಒಳ ಹರಿವು ಹೆಚ್ಚಾದ ಕಾರಣ ಕಣ್ವಾ ಜಲಾಶಯದಿಂದ ನೀರನ್ನು ಹೊರ ಬಿಡಲಾಗುತ್ತಿದೆ.
ಒಳ ಹರಿವು ಹೆಚ್ಚಾದ ಪರಿಣಾಮ ಜಲಾಶಯವನ್ನು ನೋಡಲು ಪ್ರವಾಸಿಗರು ಕೂಡ ಹೆಚ್ಚಾಗಿ ಬರುತ್ತಿದ್ದಾರೆ.
PublicNext
02/08/2022 07:17 pm