ಬೆಂಗಳೂರು: ಹವಾಮಾನದಲ್ಲಿ ಉಂಟಾಗುತ್ತಿರುವ ಏರುಪೇರುಗಳಿಂದಾಗಿ ಕರ್ನಾಟಕದಲ್ಲಿ ಮತ್ತೆ ಮುಂಗಾರು ಹೆಚ್ಚಾಗುವ ಮುನ್ಸೂಚನೆ ನೀಡಿದೆ. ರಾಜ್ಯಕ್ಕೆ ಆಗಸ್ಟ್ 6ರವರೆಗೆ ಅತೀ ಭಾರಿ ಮಳೆ ಆಗಲಿದೆ. ಈ ಪೈಕಿ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಆಗಲಿದೆ.
ಕರ್ನಾಟಕ ರಾಜ್ಯದ ಕರಾವಳಿ ಮತ್ತು ಮಲೆನಾಡು ಒಳಗೊಂಡ ದಕ್ಷಿಣ ಒಳನಾಡಿನ ಭಾಗದಲ್ಲಿ ಮುಂಗಾರು ಮಾರುತಗಳು ಹೆಚ್ಚು ಸಕ್ರಿಯವಾಗಿವೆ.
ಈ ಕಾರಣದಿಂದ ಮುಂದಿನ ಐದು ದಿನ ಉಡುಪಿ, ಉತ್ತರ ಕನ್ನಡ, ದಕ್ಷಿಣಕನ್ನಡ ಸೇರಿದಂತೆ ಕೊಡಗು, ಮಡಿಕೇರಿ, ಶಿವಮೊಗ್ಗ, ಚಿಕ್ಕಮಗಳೂರು, ಒಂದು ದಿನ ತುಮಕೂರು ಮತ್ತು ರಾಮನಗರ ಜಿಲ್ಲೆ 'ಆರೆಂಜ್ ಅಲರ್ಟ್' ನೀಡಲಾಗಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ಕೊಡಲಾಗಿದೆ.
PublicNext
02/08/2022 08:25 pm