ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಾದಗಿರಿ: ಹತ್ತನೇ ತರಗತಿ ಮಕ್ಕಳಿಗೆ ಕಾರ್ಯಗಾರ..!

ಸುರಪುರ : ಹಿಂದುಳಿದ ಯಾದಗಿರಿ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕೊನೆಯ ಸ್ಥಾನದಲ್ಲಿ ಬರುತ್ತಿರುವ ಹಿನ್ನಲೆಯಲ್ಲಿ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ಉತ್ತರಾದಿ ಮಠದಲ್ಲಿ ಶ್ರೀ ಸತ್ಯಪ್ರಮೋದ ಯುವ ಸೇನೆಯ ವತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಎರಡು ದಿನಗಳ ಕಾಲ ಪರೀಕ್ಷಾ ತರಬೇತಿಯ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಾಗಾರದಲ್ಲಿ ಪಟ್ಟಣ ಮತ್ತು ವಲಯದ ಎಲ್ಲ ಸರ್ಕಾರಿ (ಕನ್ನಡ ಮಾಧ್ಯಮ) ಪ್ರೌಢ ಶಾಲೆಯ ಸುಮಾರು 500ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮುಖ್ಯವಾಗಿ ಗಣಿತ, ವಿಜ್ಞಾನ, ಇಂಗ್ಲೀಷ್ ಮತ್ತು ಕನ್ನಡ ವಿಷಯಗಳ ಕುರಿತು ರಾಯಚೂರು, ವಿಜಯಪುರ ಹಾಗೂ ಕಲಬುರಗಿಯ ನುರಿತ ಸಂಪನ್ಮೂಲ ಶಿಕ್ಷಕರಿಂದ ಕಾರ್ಯಾಗಾರದಲ್ಲಿ ಕಲಿಸಿಕೊಟ್ಟರೂ ಜಿಲ್ಲಾ, ತಾಲೂಕಾ ಮಟ್ಟದ ಶಿಕ್ಷಣ ಇಲಾಖೆ ಅಧಿಕಾರಿಗಳು ಭಾಗವಹಿಸಿದರು.

Edited By : Manjunath H D
PublicNext

PublicNext

05/01/2025 05:57 pm

Cinque Terre

38 K

Cinque Terre

0