ಹುಬ್ಬಳ್ಳಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿ ಮೊದಲ ಬಾರಿಗೆ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸುತ್ತಿರುವ ಬಸವರಾಜ ಬೊಮ್ಮಾಯಿಯವರಿಗೆ ಸ್ವಾಗತಿಸಲು ಕಾರ್ಯಕರ್ತರ ದಂಡು ಹುಬ್ಬಳ್ಳಿಯ ವಿಮಾನ ನಿಲ್ದಾಣದತ್ತ ಹರಿದು ಬಂದಿದೆ.
ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮೊದಲ ಬಾರಿಗೆ ತಾಯಿನಾಡಿಗೆ ಬರುತ್ತಿರುವ ಹಿನ್ನಲೆಯಲ್ಲಿ ಹು-ಧಾ ಪೊಲೀಸ್ ಕಮೀಷನರೇಟ್ ನಿಂದ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ನಿಯೋಜನೆ ಮಾಡಲಾಗಿದೆ.
ಈಗಾಗಲೇ ಬಿಜೆಪಿ ಕಾರ್ಯಕರ್ತರು ಹಾಗೂ ಬಸವರಾಜ ಬೊಮ್ಮಾಯಿಯವರ ಅಭಿಮಾನಿಗಳು ಮುಖ್ಯಮಂತ್ರಿ ಆಗಮನಕ್ಕೆ ಕಾಯುತ್ತಿದ್ದಾರೆ.
Kshetra Samachara
29/07/2021 10:28 am