ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಾಲಿಕೆಯಲ್ಲಿ ಪೊಲೀಸ್ ಬಿಗಿ ಭದ್ರತೆ

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನದ ಹಿನ್ನೆಲೆಯಲ್ಲಿ, ಪಾಲಿಕೆ ಎದುರಿಗೆ ಪೊಲೀಸರು ಬಿಗಿಭದ್ರತೆ ಒದಗಿಸಿದ್ದಾರೆ.

ಹೌದು, ಜಿಲ್ಲಾಧಿಕಾರಿ ನಿತೀಶ್ ಪಾಟೀಲ ಅಗಸ್ಟ್ 16 ರಿಂದ ನಾಮಪತ್ರ ಸಲ್ಲಿಸಲು ಆದೇಶ ಹೊರಡಿಸಿದ್ದರು. ಆದರೆ ಅಗಸ್ಟ್ 18 ರ ವರಗೆ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿತ್ತು. ಇವತ್ತು ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಹಿನ್ನೆಲೆಯಲ್ಲಿ, ಎಲ್ಲ ಪಕ್ಷಗಳ ಅಭ್ಯರ್ಥಿಗಳು ನಾ ಮುಂದು ತಾ ಮುಂದು ಎಂದು ಮುಂದಾಗುತ್ತಿದ್ದಾರೆ.

ಈ ದಿಸೆಯಲ್ಲಿ ಪಾಲಿಕೆ ಆವರಣದಲ್ಲಿ ಗದ್ದಲ ಸೃಷ್ಟಿಯಾಗಬಾರದೆಂಬ ಕಾರಣಕ್ಕೆ, ಪೊಲೀಸ್ ಇಲಾಖೆ ಬಿಗಿಭದ್ರತೆ ಒದಗಿಸಿದೆ. ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ 4 ಜನ ಉಮೇದುದಾರರು, ಸ್ವತಂತ್ರ ಅಭ್ಯರ್ಥಗಳಿಗೆ 5 ಜನ ಉಮೇದುದಾರರನ್ನು ಜೊತೆಗೆ ಹೋಗಲು ಅನುಮತಿ ನೀಡಿದ್ದಾರೆ. ಈ ಕಾರಣಕ್ಕೆ ಕೆಲಕಾಲ ಪೊಲೀಸರು ಮತ್ತು ಅಭ್ಯರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯುತ್ತಿರುವ ದೃಶ್ಯಗಳು ಕಂಡು ಬಂದಿವೆ.

Edited By : Manjunath H D
Kshetra Samachara

Kshetra Samachara

23/08/2021 12:06 pm

Cinque Terre

56.32 K

Cinque Terre

1

ಸಂಬಂಧಿತ ಸುದ್ದಿ