ಶಾರ್ಜಾ: ಲಿಯಾಮ್ ಲಿವಿಂಗ್‌ಸ್ಟೋನ್ ಹ್ಯಾಟ್ರಿಕ್ ಸಿಕ್ಸ್ , ನಾಯಕ ಇಯಾನ್ ಮಾರ್ಗನ್ ಹೋರಾಟದ ನಡುವೆಯೂ ಇಂಗ್ಲೆಂಡ್ ತಂಡವು ದಕ್ಷಿಣ ಆಫ್ರಿಕಾದ ವಿರುದ್ಧ 10 ರನ್‌ಗಳಿಂದ ಸೋಲು ಕಂಡಿದೆ.
ಟಿ20 ವಿಶ್ವಕಪ್ ಟೂರ್ನಿಯ ಭಾಗವಾಗಿ ಇಂದು ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 39ನೇ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು 2 ವಿಕೆಟ್ ನಷ್ಟಕ್ಕೆ 189 ರನ್ ಚಚ್ಚಿದ್ದರು.
190 ರನ್‌ಗಳ ಗುರಿ ಬೆನ್ನತ್ತಿದ ಆಂಗ್ಲ ಪಡೆ 8 ವಿಕೆಟ್ 173 ರನ್ ಗಳಿಸಿದೆ. ಇಂಗ್ಲೆಂಡ್ ಪರ ಮೊಯಿನ್ ಅಲಿ 37 ರನ್, ಡೇವಿಡ್ ಮಲನ್ 33 ರನ್, ಲಿಯಾಮ್ ಲಿವಿಂಗ್‌ಸ್ಟೋನ್ 28 ರನ್ ಹಾಗೂ ಇಯಾನ್ ಮಾರ್ಗನ್ 17 ರನ್ ದಾಖಲಿಸಿದ್ದಾರೆ
PublicNext
06/11/2021 11:27 pm