ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರು ನಿಧನರಾಗಿ ಇಂದಿಗೆ 12ನೇ ದಿನ. ಅವರ ನೆನಪಿಗಾಗಿ ಇಂದು ಅವರ ಕುಟುಂಬ ನಗರದ ಅರಮನೆ ಮೈದಾನದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಂಡಿದೆ. 50 ಸಾವಿರಕ್ಕೂ ಹೆಚ್ಚು ಜನರಿಗೆ ವಿವಿಧ ಬಗೆಯ ಅಡುಗೆಯನ್ನು ಮಾಡಲಾಗಿದೆ.ಇನ್ನು ಏಕಕಾಲಕ್ಕೆ 5 ಸಾವಿರ ಜನರು ಕುಳಿತು ಊಟ ಮಾಡುವಂತಹ ವ್ಯವಸ್ಥೆ ಮಾಡಲಾಗಿದೆ. ಮಾಂಸಾಹಾರ ಹಾಗೂ ಸಸ್ಯಾಹಾರದ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಊಟ ಸ್ವೀಕರಿಸಬಹುದು.
ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಲಿರುವ ಹಿನ್ನೆಲೆಯಲ್ಲಿ ಅರಮನೆ ಮೈದಾನದ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಒಂದು ಸಾವಿರಕ್ಕೂ ಹೆಚ್ಚು ಬಾಣಸಿಗರು ಅಡುಗೆ ಸಿದ್ಧತೆ ಮಾಡಿದ್ದಾರೆ. 25 ಸಾವಿರ ಕೆ.ಜಿ ಅಕ್ಕಿ, 750 ಲೀ. ಅಡುಗೆ ಎಣ್ಣೆ, 3 ಸಾವಿರ ಕೆ.ಜಿ. ಚಿಕನ್, 8,500 ಕೋಳಿ ಮೊಟ್ಟೆ, 100 ಕಟ್ಟು ಪುದೀನ ಸೊಪ್ಪು, 100 ಕೆ.ಜಿ ಟೊಮ್ಯಾಟೋ, 50 ಕೆ.ಜಿ ಈರುಳ್ಳಿ, 50 ಕೆ.ಜಿ. ಬೆಳ್ಳುಳ್ಳಿಯನ್ನು ಅಡುಗೆಗೆ ಬಳಸಲಾಗಿದೆ. 50, 60,70, 80 ಕೆ.ಜಿಯ ದೊಡ್ಡ ಪಾತ್ರೆಗಳಲ್ಲಿ ಗೀರೈಸ್ ತಯಾರಿಸಲಾಗಿದೆ.
PublicNext
09/11/2021 11:45 am