ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪುಲ್ವಾಮಾ ದಾಳಿಗೆ 3 ವರ್ಷ; ಹುತಾತ್ಮ ಸೈನಿಕರನ್ನು ನೆನೆದ ವಿದ್ಯಾರ್ಥಿಗಳು

ಧಾರವಾಡ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಗೆ ಇಂದಿಗೆ ಮೂರು ವರ್ಷ ಗತಿಸಿದ ಹಿನ್ನೆಲೆಯಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳ ಸಂಘದ ವತಿಯಿಂದ ಹುತಾತ್ಮರಾದ ಸೈನಿಕರನ್ನು ನೆನೆದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗಿದೆ.

ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿರುವ ಸೈನಿಕ ಸ್ತೂಪದ ಬಳಿ ಸಂಶೋಧನಾ ವಿದ್ಯಾರ್ಥಿಗಳು ಫೆ.14ನ್ನು ದೇಶಪ್ರೇಮದ ದಿನವನ್ನಾಗಿ ಆಚರಿಸಿ ಪುಲ್ವಾಮಾದಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧರಿಗೆ ಮೊಂಬತ್ತಿ ಬೆಳಗಿ ಶ್ರದ್ಧಾಂಜಲಿ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಪುಲ್ವಾಮಾ, ಪಠಾನ್ ಕೋಟ್‌ನಲ್ಲಿ 35 ವರ್ಷ ಸೇವೆ ಸಲ್ಲಿಸಿದ ಹವಾಲ್ದಾರ್ ರಾಜೇಂದ್ರ ನಾಯಕ್ ಅವರನ್ನು ಗೌರವಿಸಲಾಯಿತು.

Edited By : Shivu K
Kshetra Samachara

Kshetra Samachara

15/02/2022 12:11 pm

Cinque Terre

16.2 K

Cinque Terre

1

ಸಂಬಂಧಿತ ಸುದ್ದಿ