ಧಾರವಾಡ: ವೇಗವಾಗಿ ಬಂದ ಕಾರು ಸಾರಿಗೆ ಸಂಸ್ಥೆಯ ಬಸ್ಸಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಪರಿಣಾಮ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಸಾವಿಗೀಡಾದ ಘಟನೆ ಧಾರವಾಡದ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.
ಧಾರವಾಡ ತಾಲೂಕಿನ ಗರಗ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಕೆಲಸ ನಿರ್ವಹಿಸುತ್ತಿದ್ದ ಡಾ.ರಾಜಶೇಖರ ಪತ್ತಾರ ಎಂಬುವವರೇ ಸಾವನ್ನಪ್ಪಿದವರು.
ಡಾ.ರಾಜಶೇಖರ್ ಅವರು ಕಾರು ತೆಗೆದುಕೊಂಡು ಗರಗ ಗ್ರಾಮದಿಂದ ಮರಳಿ ಬರುವಾಗ ಈ ದುರ್ಘಟನೆ ನಡೆದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.
ಧಾರವಾಡ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಎಚ್ಓ ಸೇರಿದಂತೆ ಹಲವು ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
Kshetra Samachara
17/02/2022 09:58 am