ಉಡುಪಿ: ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ರಮ ಕ್ರಷರ್ ಗಳನ್ನು ಕೂಡಲೇ ಬಂದ್ ಮಾಡಿಸಿ: ದಸಂಸ ಆಗ್ರಹ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಸಾಕಷ್ಡು ಸುದ್ದಿಯಾಗುತ್ತಿದ್ದರೂ ,ಜಿಲ್ಲೆಯಾದ್ಯಂತ ನಡೆಯುತ್ತಿರುವ ಅಕ್ರಮ‌ ಕಲ್ಲು ಪುಡಿ ಮಾಡುವ ಘಟಕಗಳು (ಕ್ರಷರ್) ಸಾಕಷ್ಟಿವೆ.ಜಿಲ್ಲಾಡಳಿತ ಅವುಗಳನ್ನೂ ಕೂಡ ಶೀಘ್ರ ಬಂದ್ ಮಾಡಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ಈ ಕುರಿತು ಇಂದು ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ದಸಂಸ ರಾಜ್ಯ ಸಂಘಟನಾ ಸಂಚಾಲಕರಾದ ಶೇಖರ್ ಹಾವಂಜೆ ಮಾತನಾಡಿ,ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹಲವು ವರ್ಷಗಳಿಂದ ಕ್ರಷರ್ ಗಳು ಅಕ್ರಮವಾಗಿ ಕಾರ್ಯಾಚರಿಸುತ್ತಿವೆ.ರಕ್ಷಿತಾರಣ್ಯ ಮತ್ತು ಡೀಮ್ಡ್ ಫಾರೆಸ್ಟ್ ಗಳ್ಲೂ ಕಲ್ಲು ಪುಡಿ ಮಾಡುವ ಘಟಕಗಳು ಕಾರ್ಯಾಚರಿಸುತ್ತಿವೆ.ಭಾರೀ ಪ್ರಮಾಣದಲ್ಲಿ ಸ್ಪೋಟಕಗಳನ್ನು ಸ್ಪೋಟಿಸಿ ಅಕ್ರಮವಾಗಿ ಕ್ರಷರ್ ದಂಧೆ ನಡೆಸಲಾಗುತ್ತಿದೆ.

ಈ ಸಂಬಂಧ ದಸಂಸ ದೂರನ್ನೂ ದಾಖಲಿಸಿದೆ.ಆದರೆ ತಮ್ಮ ದೂರಿಗೆ ಜಿಲ್ಲಾ ಟಾಸ್ಕ್ ಫೋರ್ಸ್ ಸ್ಪಂದಿಸಿಲ್ಲ.ನಮ್ಮ ದೂರಿಗೆ ಸ್ಪಂದಿಸದೆ ಕರ್ತವ್ಯ ಲೋಪ ಎಸಗಿದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ಉಚ್ಛ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು ಎಂದರು.ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಸಂಚಾಲಕ ವಿಶ್ವನಾಥ ಬೆಳ್ಳಂಪಳ್ಳಿ, ಸಂಘಟನಾ ಸಂಚಾಲಕ ರಾಜೇಶ್ ಕೆಳಾರ್ಕಳಬೆಟ್ಟು ಉಪಸ್ಥಿತರಿದ್ದರು.

Kshetra Samachara

Kshetra Samachara

12 days ago

Cinque Terre

4.23 K

Cinque Terre

0