ಧಾರವಾಡ ಜಿಲ್ಲೆಯಾದ್ಯಂತ 303 ಜನರ ವರದಿ ನೆಗೆಟಿವ್, 17 ಪಾಸಿಟಿವ್

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 626 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 25300 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 303 ಜನರ ವರದಿ ನೆಗೆಟಿವ್ ಎಂದು ಬಂದಿದ್ದು, 17 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 960 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 25300 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 24181 ಜನರ ವರದಿ ನೆಗೆಟಿವ್ ಎಂದು ಬಂದಿದೆ. 345 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 186 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 8 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 151 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 26516 ಜನರ ಮೇಲೆ ನಿಗಾ ಇಡಲಾಗಿದ್ದು, 3316 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 3911 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 19138 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Kshetra Samachara

Kshetra Samachara

12 days ago

Cinque Terre

161.65 K

Cinque Terre

6

 • Mehboob Shaik
  Mehboob Shaik

  how many cases in tabib land area with address

 • kalal vinni
  kalal vinni

  ಯಾವ್ ಏರಿಯಾ ಆದರೆ ಏನೋ ಒಟ್ಟಲ್ಲಿ ಬಂತ ಅಲ್ಲಾ ನಮ್ಮ ಹುಷಾರಲ್ಲಿ ನಾವ್ ಇರ್ಬೇಕು ಅಷ್ಟೇ

 • Sandhya Kulkarni
  Sandhya Kulkarni

  which area pls?

 • Veeranna Shiraguppi
  Veeranna Shiraguppi

  ಯಾವ ಊರಿನವರು ತಿಳಿಸಿ

 • Gururaj R Chebbi
  Gururaj R Chebbi

  mention area name

 • ದತ್ತು
  ದತ್ತು

  ಇವರು ಯಾವ ಏರಿಯಾ ದವರು