ಇದೀಗ ಕೇರಳ ಸರದಿ: ಕರ್ನಾಟಕ ಸಂಪರ್ಕದ ರಸ್ತೆಗಳಿಗೆ ಮಣ್ಣು ಹಾಕಿ ಕ್ಲೋಸ್

ಬಂಟ್ವಾಳ: ಕರ್ನಾಟಕ ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನೂ ಕೇರಳ ಸರಕಾರ ಇದೀಗ ಮಣ್ಣು ಮುಚ್ಚಿ ಬಂದ್ ಮಾಡಿದೆ. ಮಂಗಳೂರು ಹಾಗೂ ಕಾಸರಗೋಡಿಗೆ ಸಂಪರ್ಕ ಕಲ್ಪಿಸುವ ಈ ಒಳ ರಸ್ತೆಗಳನ್ನು ಕಾಸರಗೋಡು ಜಿಲ್ಲಾಧಿಕಾರಿ ನೇತೃತ್ವದಲ್ಲೇ ಬಂದ್ ಮಾಡಲಾಗಿದೆ.

ಮಾರ್ಚ್ ತಿಂಗಳಲ್ಲಿ ಕಾಸರಗೋಡು ಜಿಲ್ಲೆಯವರು ಒಳಗೆ ನುಸುಳದಂತೆ ಸಣ್ಣ ಸಣ್ದ ರಸ್ತೆಗಳನ್ನೂ ಕರ್ನಾಟಕ ಬಂದ್ ಮಾಡಿತ್ತು. ಆದರೀಗ ಕೇರಳ ಆ ಕೆಲಸ ಮಾಡುತ್ತಿದೆ. ಕಾಸರಗೋಡಿನಲ್ಲಿ ಕೊರೊನಾ ಪ್ರಕರಣಗಳು ಕಡಿಮೆ ಇದ್ದರೆ, ದ.ಕ.ಜಿಲ್ಲೆಯಲ್ಲಿ ಆತಂಕಕಾರಿ ಸ್ಥಿತಿ ಇದೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟೀವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲಾಡಳಿತ ಈ ದಿಢೀರ್ ನಿರ್ಧಾರವನ್ನು ತೆಗೆದುಕೊಂಡಿದೆ. ಬೆರಿಪದವು, ಪಾದೆಕಲ್ಲು, ಮುಗುಳಿ ಹಾಗೂ ಪದ್ಯಾಣ ಮೊದಲಾದ ಕಡೆಗಳಿಂದ ದಕ್ಷಿಣಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸಂಪೂರ್ಣ ಮುಚ್ಚಲಾಗಿದೆ.

Kshetra Samachara

Kshetra Samachara

12 days ago

Cinque Terre

3.42 K

Cinque Terre

0