ಮಂಗಳೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಕ್ರೋಶ

ಮಂಗಳೂರು: ಆರಂಭದಲ್ಲಿ ವೆನ್ಲಾಕ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್ ಆಸ್ಪತ್ರೆಯಾಗಿ ಮಾಡಲಾಗಿತ್ತು. ಆದರೆ ಈಗ
ಖಾಸಗಿ ಆಸ್ಪತ್ರೆಗಳನ್ನು ಅರ್ಧ ಸಾರ್ವಜನಿಕ ಹಾಗೂ ಅರ್ಧ ಕೋವಿಡ್ ಆಸ್ಪತ್ರೆಯಾಗಿ ಮಾಡಿರುವುದರಿಂದ ಜನರಿಗೆ ಆಸ್ಪತ್ರೆಗೆ ಹೋಗುವುದಕ್ಕೆ ಕಷ್ಟವಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೆನ್ಲಾಕ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡುವಾಗ ಬಡ ಜನರಿಗೆ ಸಮಸ್ಯೆಯಾಗುತ್ತದೆ. ಸಂಪೂರ್ಣ ಕೋವಿಡ್ ಆಸ್ಪತ್ರೆಯಾಗಿ ಮಾಡುವುದು ಬೇಡ ಅಂತಾ ತಿಳಿಸಿದರೂ ಅದನ್ನು ಪರಿಗಣಿಸದೆ ಸಂಪೂರ್ಣ ಕೋವಿಡ್ಆ ಸ್ಪತ್ರೆಯನ್ನಾಗಿ ಮಾಡಿದರು. ಈಗ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಏಕಾಏಕಿ ಖಾಸಗಿ ಆಸ್ಪತ್ರೆಗಳನ್ನು ಕೋವಿಡ್ ಆಸ್ಪತ್ರೆಗಳನ್ನಾಗಿ ಮಾಡಿದ್ದು ಸರಿಯಾದ ನಿರ್ಧಾರ ಅಲ್ಲ. ಇದರ ಬಗ್ಗೆ ಜಿಲ್ಲಾಢಳಿತ ಎಚ್ಚೆತ್ತುಕೊಂಡು ಸಮಸ್ಯೆಯನ್ನು ಬಗೆಹರಿಸಬೇಕು ಎಂದರು.

Kshetra Samachara

Kshetra Samachara

12 days ago

Cinque Terre

4.59 K

Cinque Terre

1

  • Brijlal Yadav
    Brijlal Yadav

    koppal distric hosahalli