ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರದಲ್ಲಿ ಆಚಾರ್ಯ ಚಿನ್ಮಯಾನಂದ ಅವದೂರ್ ಭೀಕರ ಕೊಲೆ

ಕೋಲಾರ : ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ಸ್ವಾಮೀಜಿ ಕೊಲೆಯಾಗಿರೋ ಘಟನೆ ಮಾಲೂರು ತಾಲ್ಲೂಕು ಸಂತಳ್ಳಿ ಗ್ರಾಮದಲ್ಲಿ ನಡೆದಿದೆ. ಆಚಾರ್ಯ ಚಿನ್ಮಯಾನಂದ ಅವದೂರ್ (65) ಕೊಲೆಯಾದ ಸ್ವಾಮೀಜಿ.

ಆಚಾರ್ಯ ಧರ್ಮ ಪ್ರಾಣಾನಂದ ಹಾಗೂ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿಗಳ ಬೆಂಬಲಿಗರ ಗುಂಪಿನ ನಡುವೆ ಗಲಾಟೆಯಾಗಿದ್ದು, ಧರ್ಮಪ್ರಾಣಾನಂದ ಸ್ವಾಮೀಜಿ ಬೆಂಬಲಿಗರ ಗುಂಪಿನಿಂದ ಚಿನ್ಮಯಾನಂದ ಸ್ವಾಮೀಜಿ ಹತ್ಯೆಯಾಗಿದೆ.

ಮಾಲೂರು ತಾಲ್ಲೂಕು ಸಂತಳ್ಳಿ ಗ್ರಾಮದ ನಾಲ್ಕು ಎಕರೆ ಆಶ್ರಮದ ಜಾಗಕ್ಕಾಗಿ ವಿವಾದ ನಡೆಯುತ್ತಿತ್ತು. ಕಳೆದ ಹಲವು ವರ್ಷಗಳಿಂದ ವಿವಾದ ಕೋರ್ಟ್ ಮೆಟ್ಟಿಲೇರಿತ್ತು. ಇಂದು ಬೆಳಿಗ್ಗೆ ಕೋರ್ಟ್​ಗೆ ದಾಖಲೆ ಸಹಿತ ಹೋಗುವ ವೇಳೆ ಮಾರಣಾಂತಿಕ ಹಲ್ಲೆ ನಡೆದಿದೆ ಎನ್ನಲಾಗಿದೆ.

ಇದೇ ಗಲಾಟೆಯಲ್ಲಿ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿಗೆ ಗಂಭೀರ ಗಾಯವಾಗಿತ್ತು. ಆ ಕೂಡಲೇ ಅವರನ್ನು ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸ್ವಾಮೀಜಿ ಮೃತಪಟ್ಟಿದ್ದಾರೆ. ಈ ಕೊಲೆ ಸಂಬಂಧ ಆಚಾರ್ಯ ಧರ್ಮ ಪ್ರಾಣಾನಂದ ಹಾಗೂ ಅರುಣ್ ಎಂಬುವವರನ್ನು ಮಾಲೂರು ಪೊಲೀಸ್​ ಅಧಿಕಾರಿಗಳು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Edited By : Nirmala Aralikatti
PublicNext

PublicNext

22/06/2024 05:22 pm

Cinque Terre

258.35 K

Cinque Terre

8