ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಟ: ರೈತ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ - ವಕೀಲ ಮಂಜುನಾಥ್ ಗಿಳಿಯಾರ್

ಕೋಟ: ದೇಶದ ಬೆನ್ನೆಲುಬಾಗಿರುವ ರೈತರಿಗೆ ಹಾಗೂ ಅಅವರ ಕಾರ್ಯಕ್ಕೆ ಸೂಕ್ತವಾದ ಬೆಂಬಲ ಹಾಗೂ ಪ್ರೋತ್ಸಾಹ ಅತ್ಯಗತ್ಯ ಎಂದು ಖ್ಯಾತ ವಕೀಲ ಟಿ.ಮಂಜುನಾಥ್ ಗಿಳಿಯಾರು ಹೇಳಿದರು.

ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಅದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿಸಂಘ ಕೋಟ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಗೆಳೆಯರ ಬಳಗ ಕಾರ್ಕಡ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಜೆಸಿಐ ಸೀನಿಯರ್ ಕೋಟ ಇವರುಗಳ ಸಹಯೋಗದೊಂದಿಗೆ ನಡೆದ ರೈತರೆಡೆಗೆ ನಮ್ಮ ನಡಿಗೆ 37ನೇ ಮಾಲಿಕೆಯಲ್ಲಿ ಗಿಳಿಯಾರು ಭೋಜ ಪೂಜಾರಿಯವರನ್ನು ಸನ್ಮಾನಿಸಿ ಮಾತನಾಡಿದರು. ಸರ್ಕಾರಗಳು ಕೃಷಿ ಕಾರ್ಯಕ್ಕೆ ಹೆಚ್ಚಿನ ಉತ್ತೇಜನ ನೀಡಬೇಕು.

ನಿತ್ಯ ಶ್ರಮಿಸುವ ರೈತರು ಬೆಳೆಯುವ ಬೆಳೆ ಹಾನಿಗೊಳಗಾದಾಗ ಸೂಕ್ತ ಪರಿಹಾರ, ಪರ್ಯಾಯ ವ್ಯವಸ್ಥೆ ಕಲ್ಪಿಸುವತ್ತ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ರೈತರನ್ನು ಗುರುತಿಸುವ ಪಂಚವರ್ಣ ಸಂಸ್ಥೆ ಕಾರ್ಯ ಶ್ಲಾಘನೀಯ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಪಾಂಡೇಶ್ವರ ರಕ್ತೇಶ್ಚರಿ ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ಮಾತನಾಡಿ, ರೈತರೆಡೆಗೆ ನಮ್ಮ ನಡಿಗೆ ಮೂಲಕ ಪಂಚವರ್ಣ ಸಂಸ್ಥೆ ಭೋಜ ಪೂಜಾರಿ ಎಂಬ ಅರ್ಹ ವ್ಯಕ್ತಿಗೆ ಗೌರವಿಸುತ್ತಿರುವುದು ಖುಷಿಯ ವಿಚಾರ ಎಂದರು.

ಬಿಲ್ವಪತ್ರೆ ಗಿಡ ನೆಡುವುದರ ಮೂಲಕ ಗಾಡಿ ಕೂಸಣ್ಣ ದಂಪತಿಗಳು ಚಾಲನೆ ನೀಡಿದರು. ಭೋಜ ಪೂಜಾರಿ ದಂಪತಿಗಳು ಗೋ ಪೂಜೆ ನೆರವೆರಿಸಿದರು. ಇದೇ ಸಂದರ್ಭ ಯುವ ಕೃಷಿಕ, ಕಂಬಳ ಸಾಧಕ ಭೋಜ ಪೂಜಾರಿ ಇವರನ್ನು ತಂದೆ ಗಾಡಿ ಕೂಸ ಪೂಜಾರಿ, ತಾಯಿ ಗಿರೀಜಾ, ಪತ್ನಿ ಸವಿತಾ ಸಮ್ಮುಖದಲ್ಲಿ ಸಾಧಕ ರೈತ ಪುರಸ್ಕಾರ ನೀಡಲಾಯಿತು. ನಾಲ್ಕು ಪ್ರಸಿದ್ಧ ಕಂಬಳದ ಕೋಣೆಗಳು ಗಾಡಿ ಕೂಸಣ್ಣನ ಎತ್ತಿನಗಾಡಿ ಗಮನ ಸೆಳೆದವು.

ಪಂಚವವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಸಂಯೋಜಕ ರವೀಂದ್ರ ಮೊಗವೀರ, ಮಾಜಿ.ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್, ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯ ರಾಜು ಪೂಜಾರಿ ಕಾರ್ಕಡ, ಪುನಿತ್ ಪೂಜಾರಿ ಪಾರಂಪಳ್ಳಿ, ಶ್ಯಾಮಸುಂದರ್ ನಾಯರಿ, ಸಂಜೀವ ದೇವಾಡಿಗ, ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ಬೀಜಾಡಿ ಗ್ರಾಮಪಂಚಾಯತ್ ಅಧ್ಯಕ್ಷ ಪ್ರಕಾಶ್ ಪೂಜಾರಿ, ರಾಷ್ಟ್ರೀಯ ಮಾನವ ಹಕ್ಕು ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೋಟ ದಿನೇಶ್ ಗಾಣಿಗ, ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಶೆಣೈ,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ಹಿರಿಯ ಕೃಷಿಕ ಭಾಸ್ಕರ್ ಶೆಟ್ಟಿ ಮಣೂರು, ರೈತ ಧ್ವನಿ ಸಂಘ ಕೋಟ ಅಧ್ಯಕ್ಷ ಎಂ ಜಯರಾಮ ಶೆಟ್ಟಿ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ಪಂಚವರ್ಣ ಯುವಕ ಮಂಡಲದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಜೆಸಿಐ ಸಿನಿಯರ್ ಕೋಟ ಅಧ್ಯಕ್ಷ ಕೇಶವ ಆಚಾರ್ ಕೋಟ ಮತ್ತಿತರರು ಉಪಸ್ಥಿತರಿದ್ದರು. ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿ ಪ್ರಾಸ್ತಾವಿಸಿ ಸಂಯೋಜಿಸಿದರು.

ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ, ಶಿಕ್ಷಕ ಸಂತೋಷ್ ಕುಮಾರ್ ಕೋಟ ನಿರೂಪಿಸಿದರು. ಪಂಚವರ್ಣ ಮಹಿಳಾ ಮಂಡಲದ ಕಾಯಾಧ್ಯಕ್ಷೆ ಕಲಾವತಿ ಅಶೋಕ್ ವಂದಿಸಿದರು.

Edited By : PublicNext Desk
Kshetra Samachara

Kshetra Samachara

22/07/2024 01:19 pm

Cinque Terre

1.68 K

Cinque Terre

0

ಸಂಬಂಧಿತ ಸುದ್ದಿ