ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪತಿ ನಿವೃತ್ತಿ, ಪತ್ನಿಗೆ ಅದೇ ಹುದ್ದೆ ನೇಮಕಕ್ಕೆ ಸಂಪುಟ ಸಭೆ ಅಸ್ತು

ಬೆಂಗಳೂರು : ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಜುಲೈ 31 ರಂದು ನಿವೃತ್ತಿಯಾಗುತ್ತಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ ಅವರ ಪತ್ನಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ ಕೆ ಪಾಟೀಲ್​ ಅವರು, ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್​ರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದರು. 1989ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಶಾಲಿನಿ ರಜನೀಶ್ ಅವರು 2027ರ ಜೂನ್ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ.

Edited By : Nirmala Aralikatti
PublicNext

PublicNext

27/07/2024 09:16 am

Cinque Terre

221.82 K

Cinque Terre

0