ಹಾವೇರಿ: ನಿರಂತರ ಮಳೆಗೆ ಶಾಲೆಯ ಮೇಲ್ಛಾವಣಿ ಕುಸಿದು ವಿದ್ಯಾರ್ಥಿ ಗಾಯಗೊಂಡ ಘಟನೆ ಹಾವೇರಿ ತಾಲೂಕು ನೀರಲಗಿ ಗ್ರಾಮದಲ್ಲಿ ನಡೆದಿದೆ. ಹಾವೇರಿ ತಾಲೂಕಿನ ನೀರಲಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತ ತಪ್ಪಿದಂತಾಗಿದೆ. 25 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ೫ ನೇ ತರಗತಿ ವಿನಾಯಕ್ ಮೋರೆ ಗಾಯಗೊಂಡ ವಿದ್ಯಾರ್ಥಿ. ಬಾಲಕನ ಕಾಲಿನ ಮೇಲೆ ಮೇಲ್ಛಾವಣಿಯ ಕಂಬ ಬಿದ್ದಿದ್ದು ಕಾಲಿಗೆ ಗಂಭೀರ ಗಾಯವಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗುತ್ತಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
PublicNext
01/08/2024 06:32 pm