ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮಹಿಳಾ ಕೆಎಎಸ್ ಅಧಿಕಾರಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಮಹಿಳಾ ಕೆಎಎಸ್ ಅಧಿಕಾರಿಯಿಂದ ಹಣಕ್ಕೆ ಡಿಮ್ಯಾಂಡ್ ಮಾಡಿದ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಮ್ ಹಾಗೂ ಸುನೀಲ್ ಎಂಬ ಇಬ್ಬರ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ಜೀವನ ಭೀಮ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸದ್ಯ ಪೊಲೀಸ್ರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಕೆಎಎಸ್ ಅಧಿಕಾರಿ ಡಾ. ಬಿ ಸುಧಾ‌ ವಿರುದ್ಧ ಲೋಕಾಯುಕ್ತ, ಎಸಿಬಿ‌ಗೆ ಅಬ್ರಹಾಮ್ ಭ್ರಷ್ಟಾಚಾರ ಆರೋಪದಡಿ ದೂರು ನೀಡಿದ್ರು. ದೂರಿನ ಸಂಬಂಧ ಯಾವುದೇ ತೊಂದರೆ‌ ಕೊಡದಿರಲು ಡೀಲ್ ನಡೆಸಿ ಒಂದು ಕೋಟಿಗೆ ಬೇಡಿಕೆ ಇಟ್ಟಿರೋದಾಗಿ ದೂರು ದಾಖಲಾಗಿತ್ತು.

ಈ ಬಗ್ಗೆ 2023ರಲ್ಲಿ ಜೀವನಭೀಮಾ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಪ್ರಕರಣದಲ್ಲಿ ಆಡಿಯೋ ಮತ್ತು ವಿಡಿಯೋ ಸಂಬಂಧಿಸಿದ ಎಫ್ ಎಸ್ ಎಲ್ ವರದಿ ಬಂದಿದ್ದು ಸದ್ಯ 10ನೇ ಎಸಿಎಂಎಂ ನ್ಯಾಯಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿದೆ.

Edited By : Nagaraj Tulugeri
PublicNext

PublicNext

07/08/2024 12:15 pm

Cinque Terre

22.27 K

Cinque Terre

0

ಸಂಬಂಧಿತ ಸುದ್ದಿ