ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ : ವಿದ್ಯುತ್ ತಗುಲಿ ತಂದೆ ಮಗ ಸಾವು

ಹಾವೇರಿ : ಪಂಪಸೆಟ್ ದುರಸ್ತಿ ಮಾಡಲು ಹೋಗಿ ವಿದ್ಯುತ್ ತಗುಲಿ ತಂದೆ ಮಗ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಪತ್ತೇಪುರ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಮೃತರನ್ನ 50 ವರ್ಷದ ಕರಬಸಪ್ಪ ಕಡೇನಾಯಕನಹಳ್ಳಿ 26 ವರ್ಷದ ದರ್ಶನ ಎಂದು ಗುರುತಿಸಲಾಗಿದೆ. ಕರಬಸಪ್ಪ ಮತ್ತು ದರ್ಶನ ತಂದೆ ಮಗನಾಗಿದ್ದು ಪಂಪಸೆಟ್ ದುರಸ್ತಿ ಮಾಡಲು ಮುಂದಾಗಿದ್ದರು.

ಭತ್ತದ ಬೆಳೆಗೆ ನೀರು ಹಾಯಿಸಲು ಮೋಟಾರ್ ಸ್ಟಾರ್ಟ್ ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ.ವಿದ್ಯುತ್ ಸ್ಪರ್ಷಕ್ಕೆ ಪಂಪಸೆಟ್ ಮೇಲೆ ಬಿದ್ದು ತಂದೆ ಮಗ ಸಾವನ್ನಪ್ಪಿದ್ದಾರೆ.ಹಲಗೇರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Edited By : Nirmala Aralikatti
Kshetra Samachara

Kshetra Samachara

07/08/2024 02:36 pm

Cinque Terre

44.88 K

Cinque Terre

0