ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿದ್ಯಾರಣ್ಯ: ಚದುರಂಗದಲ್ಲಿ ರಾಜ್ಯಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಗೆ ಅಭಿನಂದನೆ

ಕುಂದಾಪುರ: ಹಿಂದೆ ರಾಜಾಶ್ರಯದಲ್ಲಿ  ಬೆಳಕು ಕಾಣುತ್ತಿದ್ದ ಪ್ರತಿಭೆಗಳು ಇಂದು ಶಾಲೆಗಳಲ್ಲಿ ಬೆಳಕು ಕಾಣುತ್ತಿವೆ. ಮಕ್ಕಳಲ್ಲಿ ಅಡಕವಾಗಿರುವ ಪ್ರತಿಭೆಗಳನ್ನು ಹೊರಜಗತ್ತಿಗೆ ತರಲು ಶಾಲೆಯಷ್ಟು ಒಳ್ಳೆಯ ವೇದಿಕೆ ಬೇರೆಡೆ ಸಿಗಲು ಸಾಧ್ಯವಿಲ್ಲ ಎಂದು  ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ನಿರ್ದೇಶಕರಾಗಿರುವ ಡಾ.ಜೀವನ್ ರಾಮ್ ಸುಳ್ಯ ಹೇಳಿದರು. 

ಯಡಾಡಿ - ಮತ್ಯಾಡಿಯ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಆಯೋಜಿಸಲಾಗಿದ್ದ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ಪ್ರೌಢ ಶಾಲಾ ವಿಭಾಗದ 17 ವರ್ಷ ವಯೋಮಾನದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ದಬ್ಬೆಕಟ್ಟೆಯ ಪ್ರಕಾಶ್ ಪಿ.ಶೆಟ್ಟಿ ಮತ್ತು ಸಂಗೀತ ಶೆಟ್ಟಿ ಅವರ ಪುತ್ರಿಯಾಗಿದ್ದು ಪ್ರಸ್ತುತ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 9ನೆ ತರಗತಿಯ ವಿದ್ಯಾರ್ಥಿನಿ  ಪ್ರಕೃತಿ ಪಿ. ಶೆಟ್ಟಿಯವರನ್ನು ಸನ್ಮಾನಿಸಿ ಮಾತನಾಡಿದರು.

ಶಾಲಾ ಆಡಳಿತ ಮಂಡಳಿಯ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಯಕ್ಷಗಾನ ಕಲಾವಿದೆ ಅಶ್ವಿನಿ ಕೊಂಡದಕುಳಿ, ಭರತನಾಟ್ಯ ಕಲಾವಿದೆ ವಿದುಷಿ ವಿದ್ಯಾ ಸಂದೇಶ್, ವಿದುಷಿ ಸ್ವಪ್ನ ಕಿಶೋರ್, ವಿದ್ವಾನ್ ಕೆ.ಭವಾನಿ ಶಂಕರ್, ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಮತ್ತು ಮುಖ್ಯ ಶಿಕ್ಷಕ ಪ್ರದೀಪ್ ಕೆ ಶುಭ ಹಾರೈಸಿದರು. ಶಿಕ್ಷಕ ಸಂತೋಷ್ ಕುಮಾರ್ ಮತ್ತು ಶಿಕ್ಷಕಿ ರೇಣುಕಾ ಕಾರ್ಯಕ್ರಮ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

05/09/2024 08:56 pm

Cinque Terre

2.62 K

Cinque Terre

0

ಸಂಬಂಧಿತ ಸುದ್ದಿ