ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮಹದಾಯಿ ಹೋರಾಟದ ಮಹಾ ಕಹಳೆ ಮೊಳಗಿಸಿದ ಸಿಎಂ, ನಾಲ್ಕೈದು ದಶಕದ ಬೇಡಿಕೆಗೆ ಬಲ..!

ಹುಬ್ಬಳ್ಳಿ; ನಾಲ್ಕೈದು ದಶಕಗಳ ಮಹದಾಯಿ ಹೋರಾಟ ಈಗ ಮತ್ತೇ ಮುನ್ನೆಲೆಗೆ ಬಂದಿದೆ. ರಾಜ್ಯ ಸರ್ಕಾರದ ನೇತೃತ್ವದಲ್ಲಿ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆ ಬಗ್ಗೆ ಸಿದ್ದರಾಮಯ್ಯ ಸರ್ಕಾರ ಹೋರಾಟದ ಮಹಾಕಹಳೆ ಮೊಳಗಿಸಲು ಮುಂದಾಗಿದೆ.

ತೆರಿಗೆ ತಾರತಮ್ಯ, ಅನುದಾನ ಹಂಚಿಕೆ ವಿಚಾರದ ಬಳಿಕ ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಸರ್ಕಾರ ಮಹದಾಯಿ ಹೋರಾಟದ ಮಹಾಕಹಳೆ ಮೊಳಗಿಸಿದೆ. ಹೌದು..ಮಹದಾಯಿ ವಿಚಾರವಾಗಿ ವನ್ಯಜೀವಿ ಮಂಡಳಿ ಯಾವುದೇ ತೀರ್ಮಾನ ಕೈಗೊಳ್ಳದೆ ವಿಷಯ ಬಾಕಿ ಇಟ್ಟಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ತರಲು ಮೂರು ರೀತಿಯ ಸಮರ ಸಾರಲು ತೀರ್ಮಾನಿಸಿದೆ.

ಕೇಂದ್ರದ ವನ್ಯಜೀವಿ ಮಂಡಳಿಯ 79 ನೇ ಸಭೆ ಎದುರು ಮಹದಾಯಿ ಯೋಜನೆಗೆ ಅನುಮತಿ ನೀಡುವ ಅಜೆಂಡಾ ಇತ್ತು. ಆದರೆ ಈ ವಿಚಾರವಾಗಿ ಯಾವುದೇ ತೀರ್ಮಾನ ಹೊರಬೀಳದ ಹಿನ್ನೆಲೆಯಲ್ಲಿ ಈ ವಿಚಾರ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆಗೊಳಪಟ್ಟಿತು. ಈ ವಿಚಾರವಾಗಿ ಸರ್ವಪಕ್ಷ ಸಭೆ ಕರೆದು ನಿರ್ಣಯ ಕೈಗೊಂಡು ಪ್ರಧಾನಿ ಬಳಿಗೆ ತೆರಳಿ ಕೇಂದ್ರದ ಮಧ್ಯಸ್ಥಿಕೆಗೆ ಒತ್ತಾಯಿಸುವುದು, ಕಾನೂನು ತಜ್ಞರ ಜೊತೆ ಚರ್ಚಿಸಿ ಸುಪ್ರೀಂಕೋರ್ಟ್ ಮೊರೆ ಹೋಗುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.

ಇನ್ನೂ ಉತ್ತರ ಕರ್ನಾಟಕ ಭಾಗದಲ್ಲಿ ಮಹದಾಯಿ ಕುರಿತು ಸಾಕಷ್ಟು ಹೋರಾಟಗಳು ನಡೆದಿವೆ. ಅಲ್ಲದೇ ಉತ್ತರ ಕರ್ನಾಟಕದ ಹೃದಯ ಭಾಗವಾದ ಹುಬ್ಬಳ್ಳಿಯಲ್ಲಿಯೇ ಬಹುದೊಡ್ಡ ಹೋರಾಟದ ಕಿಚ್ಚು ಹತ್ತಿದೆ. ಈ ನಿಟ್ಟಿನಲ್ಲಿ ಈಗ ಸಿಎಂ ಸಿದ್ಧರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರದ ಕಾನೂನು ರೀತಿಯಲ್ಲಿ ಹೋರಾಟಕ್ಕೆ ಮುಂದಾಗಿದೆ.

ಒಟ್ಟಿನಲ್ಲಿ ಉತ್ತರ ಕರ್ನಾಟಕ ಬಹುದಿನದ ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರ ಕಾಳಜಿ ವಹಿಸಬೇಕಿದೆ. ಹೋರಾಟವನ್ನು ತಾರ್ಕಿಕ ಹಂತಕ್ಕೆ ತಲುಪಿಸಿ ಈ ಭಾಗದ ಜನರ ಸಮಸ್ಯೆಗೆ ಸ್ಪಂದಿಸುವ ಕಾರ್ಯವನ್ನು ಮಾಡಬೇಕಿದೆ.

ಮಲ್ಲೇಶ ಸೂರಣಗಿ, ಪಬ್ಲಿಕ್ ನೆಕ್ಸ್ಟ್, ಹುಬ್ಬಳ್ಳಿ

Edited By : Suman K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

06/09/2024 12:44 pm

Cinque Terre

61.79 K

Cinque Terre

4

ಸಂಬಂಧಿತ ಸುದ್ದಿ