ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 10ರಿಂದ 18ರವರೆಗೆ ಮದ್ಯ ಮಾರಾಟ ನಿಷೇಧ

ಧಾರವಾಡ: ಗಣೇಶ ಹಬ್ಬ ಹಾಗೂ ಈದ್-ಮಿಲಾದ್ ಹಬ್ಬದ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮದ್ಯಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ-ಧಾರವಾಡ ಮಹಾನಗರ ಹೊರತುಪಡಿಸಿ) ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶ ಹೊರಡಿಸಿದ್ದಾರೆ.

ಈ ಕುರಿತು ಆದೇಶಿಸಿರುವ ಅವರು, ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ-ಧಾರವಾಡ ಮಹಾನಗರ ಹೊರತು ಪಡಿಸಿ) ಸೆ.10 ರ ರಾತ್ರಿ 11-59 ಗಂಟೆಯಿಂದ ಸೆಪ್ಟೆಂಬರ್12 ರ ಬೆಳಿಗ್ಗೆ 6 ಗಂಟೆಯವರೆಗೆ ಮತ್ತು ಸೆಪ್ಟೆಂಬರ್ 12ರ ರಾತ್ರಿ 11-59 ರಿಂದ ಸೆಪ್ಟೆಂಬರ್14 ರ ಬೆಳಿಗ್ಗೆ 6 ಗಂಟೆಯವರಗೆ ಹಾಗೂ ಸೆಪ್ಟೆಂಬರ್14 ರ ರಾತ್ರಿ 11-59 ಗಂಟೆಯಿಂದ ಸೆಪ್ಟೆಂಬರ್18 ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಆದೇಶಿಸಿದ್ದಾರೆ.

ಆದ್ದರಿಂದ ಯಾವತ್ತೂ ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು, ಬೀರ್ ಬಾರ್‌ಗಳು, ಕ್ಲಬ್‍ಗಳು ಮತ್ತು ಮದ್ಯದ ಡಿಪೊಗಳನ್ನು ಈ ನಿಷೇದಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಮುಚ್ಚತಕ್ಕದ್ದು.

ಇದಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ಜಿಲ್ಲೆಯ ಅಬಕಾರಿ ಇಲಾಖೆಯ ಅಧಿಕಾರಿಗಳು ಕರ್ನಾಟಕ ಅಬಕಾರಿ ಕಾಯ್ದೆ- 1965ರ ಕಲಂ 21(2) ರ ಅನ್ವಯ ಅವಶ್ಯಕತೆ ಕಂಡುಬಂದಲ್ಲಿ, ಶಾಂತಿ ಪಾಲನೆಗಾಗಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

06/09/2024 03:25 pm

Cinque Terre

110.12 K

Cinque Terre

8

ಸಂಬಂಧಿತ ಸುದ್ದಿ