ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು:ಲೈಂಗಿಕ ದೌರ್ಜನ್ಯ ಆರೋಪ;ಅರುಣ್ ಕುಮಾರ್ ಪುತ್ತಿಲ ವಿರುದ್ದ ಮಾನವ ಹಕ್ಕುಗಳ ಆಯೋಗಕ್ಕೆ ದೂರು

ಪುತ್ತೂರು,: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದ ಮಹಿಳೆ ಇದೀಗ ಪುತ್ತಿಲ ವಿರುದ್ದ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೂ ದೂರು ನೀಡಿದ್ದಾರೆ.

ತಾನು ನೀಡಿರುವ ದೂರಿನಲ್ಲಿ ಉಲ್ಲೇಖಿಸಿರುವಂತೆ ಪ್ರಕರಣ ದಾಖಲಿಸಿಕೊಳ್ಳಲಿಲ್ಲ ಎಂದು ಪೊಲೀಸರ ವಿರುದ್ದವೂ ಸಂತ್ರಸ್ತೆ ಆಯೋಗಕ್ಕೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ಮಹಿಳೆಯ ದೂರಿನಂತೆ ಲೈಂಗಿಕ ದೌರ್ಜನ್ಯ, ನಂಬಿಕೆ ದ್ರೋಹ, ಕೊಲೆ ಬೆದರಿಕೆ ಒಡ್ಡಿರುವ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಆದರೆ ಮಹಿಳೆ ನೀಡಿರುವ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ ಎಂಬ ಆರೋಪ ವ್ಯಕ್ತವಾಗಿತ್ತು. ಆ ಬಳಿಕ ಆರೋಪಿಯ ವಿರುದ್ಧ ಅತ್ಯಾಚಾರ ಪ್ರಕರಣ (ಐಪಿಸಿ 376) ಸೇರ್ಪಡೆಗೊಳಿಸಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿತ್ತು.

ಮಹಿಳೆಯ ದೂರಿನಂತೆ ತನಿಖೆ ಮುಂದುವರಿಸಿದ್ದ ಪುತ್ತೂರುನಗರ ಪೊಲೀಸರು ಠಾಣೆ ಇನ್‌ಸ್ಪೆಕ್ಟರ್ ಸತೀಶ್ ಜಿ.ಜೆ. ಅವರ ನೇತೃತ್ವದಲ್ಲಿ ಸಂತ್ರಸ್ತ ಮಹಿಳೆಯನ್ನು ಸೆ.2ರಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿ, ಬಳಿಕ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಆಕೆಯ ಹೇಳಿಕೆ ಪಡೆದುಕೊಳ್ಳಲಾಗಿತ್ತು. ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎನ್ನಲಾದ ಮಹಿಳೆ ನೀಡಿದ ದೂರಿನಲ್ಲಿರುವ ಬೆಂಗಳೂರಿನ ಹೊಟೇಲ್‌ಗೆ ತೆರಳಿ ಸೆ.3ರಂದು ಮಹಜರು ನಡೆಸಲಾಗಿತ್ತು ಎನ್ನಲಾಗಿದ್ದು, ಇದೀಗ ಮಹಿಳೆಯು ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿ ತನ್ನ ಮೇಲೆ ಅತ್ಯಾಚಾರ ಎಸಗಿರುವ ಅರುಣ್‌ ಕುಮಾರ್ ಪುತ್ತಿಲರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ತಾನು ದೂರು ನೀಡಲು ಆಗಸ್ಟ್ 30ರಂದು ಪುತ್ತೂರು ಠಾಣೆಗೆ ತೆರಳಿದಾಗ ಪೊಲೀಸರು ತನ್ನ ದೂರನ್ನು ಸ್ವೀಕರಿಸದೆ 3 ದಿನಗಳ ಕಾಲ ಕಾಯಿಸಿದ್ದಾರೆ. ಈ ಬಗ್ಗೆ ನಾನು ಪುತ್ತೂರು ಮಹಿಳಾ ಠಾಣೆಯಲ್ಲಿ ಸೆ.1ರಂದು ಧರಣಿ ನಡೆಸಿದ ಬಳಿಕ ದೂರು ಸ್ವೀಕರಿಸಿದ್ದಾರೆ. ನಾನು ನೀಡಿರುವ ಅತ್ಯಾಚಾರ ದೂರನ್ನು ಬದಲಾಯಿಸಿ ಆರೋಪಿಗೆ ಜಾಮೀನು ಸಿಗಬಹುದಾದ ಕಲಂ ಬರುವಂತಹ ದೂರು ದಾಖಲಿಸಿಕೊಂಡಿದ್ದಾರೆ ಎಂದು ಮಾನವ ಹಕ್ಕುಗಳ ಆಯೋಗಕ್ಕೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

07/09/2024 12:38 pm

Cinque Terre

5.85 K

Cinque Terre

0

ಸಂಬಂಧಿತ ಸುದ್ದಿ