ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿಯಲ್ಲಿ ಸಂಭ್ರಮದ ಗಣೇಶ ಚತುರ್ಥಿ

ಹಾವೇರಿ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಗಣೇಶ ಚತುರ್ಥಿ ಆಚರಿಸಲಾಗುತ್ತಿದೆ. ಗಣೇಶ ಮೂರ್ತಿಗಳನ್ನು ಮಾರಾಟಕ್ಕಿಟ್ಟ ದೇವಸ್ಥಾನಗಳಿಗೆ ತೆರಳಿದ ಭಕ್ತರು ಗಣೇಶ ಮೂರ್ತಿಗಳಿಗೆ ಪೂಜೆ ಸಲ್ಲಿಸಿದರು. ನಂತರ ಬಾಜಾ ಭಜಂತ್ರಿಯೊಂದಿಗೆ ಗಣೇಶ ಮೂರ್ತಿಗಳನ್ನು ಮನೆಗೆ ತಗೆದುಕೊಂಡು ಹೋಗಿ ಪ್ರತಿಷ್ಠಾಪನೆ ಮಾಡಿ ಪೂಜೆ ಸಲ್ಲಿಸಿದರು. ಮುಂಜಾನೆಯಿಂದಲೇ ಭಕ್ತರು ಗಣೇಶ ವಿಗ್ರಹಗಳನ್ನು ಮನೆಗೆ ತಗೆದುಕೊಂಡು ಹೋಗಿ ಪೂಜೆ ಸಲ್ಲಿಸುತ್ತಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಮೆರವಣಿಗೆ ಮೂಲಕ ಕರೆದೊಯ್ಯಲಾಯಿತು. ತೆರೆದ ವಾಹನದಲ್ಲಿ ಸಿಂಗರಿಸಿದ ಗಣೇಶ ಮೂರ್ತಿಗಳನ್ನು ಮೆರವಣಿಗೆ ಮೂಲಕ ಕರೆದೊಯ್ಯಲಾಯಿತು. ಗಣೇಶ ಮೂರ್ತಿಗಳ ಮುಂದೆ ಪಟಾಕಿ ಸಿಡಿಸಿ ಕುಣಿದು ಕುಪ್ಪಳಿಸುವ ಮೂಲಕ ಗಣೇಶ ಮೂರ್ತಿಗಳನ್ನು ತಗೆದುಕೊಂಡು ಹೋಗಿ ಪ್ರತಿಷ್ಠಾಪಿಸಲಾಯಿತು.

ಕೆಲ ಗಣಪತಿಗಳ ಮೆರವಣಿಗೆ ಜಾಂಜ್ ಸೇರಿದಂತೆ ವಿವಿಧ ಕಲಾ ತಂಡಗಳು ಮೆರುಗು ನೀಡಿದವು. ಸಾರ್ವಜನಿಕರು ಮನೆಗಳಲ್ಲಿ ಸ್ಥಾಪಿಸುವ ಗಣೇಶ ಮೂರ್ತಿಗಳನ್ನು ತಲೆಯ ಮೇಲೆ ಹೊತ್ತು ಸಾಗಿದರು. ಕೆಲವರು ಆಟೋ ಕಾರ್ ಮತ್ತು ಬೈಕ್‌ಗಳ ಮೂಲಕ ಗಣೇಶ ಮೂರ್ತಿಗಳನ್ನು ತಗೆದುಕೊಂಡು ಹೋದರು. ನಗರದ ಗಣೇಶ ದೇವಸ್ಥಾನಗಳಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಗಣೇಶ ಚತುರ್ಥಿ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತರು ಗಣೇಶ ದೇವಸ್ಥಾನಗಳಿಗೆ ತೆರಳಿ ಸರತಿಯಲ್ಲಿ ಗಣೇಶ ದರ್ಶನ ಪಡೆದರು.

Edited By : PublicNext Desk
Kshetra Samachara

Kshetra Samachara

07/09/2024 03:43 pm

Cinque Terre

5.86 K

Cinque Terre

0